ಎನ್‌ಡಿಆರ್‌ಫ್ ಪರಿಹಾರ ಮೊತ್ತ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಆರ್‌.ಅಶೋಕ್‌

  |   Karnatakanews

ವಿಧಾನ ಪರಿಷತ್ತು: "ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಅಡಿ ನೀಡುವ ಮೊತ್ತವನ್ನು ಹೆಚ್ಚಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ' ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

ಸದನದಲ್ಲಿ ನೆರೆ ಹಾವಳಿ ಕುರಿತ ಚರ್ಚೆಯಲ್ಲಿ ಪ್ರತಿಪಕ್ಷದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ಪ್ರತಿ ಐದು ವರ್ಷಗಳಿಗೊಮ್ಮೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಅಡಿ ನೀಡುವ ಪರಿಹಾರದ ಮೊತ್ತ ಪರಿಷ್ಕರಣೆ ಆಗುತ್ತದೆ. ಆದಾಗ್ಯೂ ಪ್ರಸ್ತುತ ನೀಡುತ್ತಿರುವ ಅನುದಾನ ಕಡಿಮೆ. ಹಾಗಾಗಿ, ಆ ಪ್ರಮಾಣವನ್ನು ಹೆಚ್ಚಿಸುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಪೂರಕ ಸ್ಪಂದನೆ ದೊರೆಯುವ ವಿಶ್ವಾಸ ಇದೆ' ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್‌ ಸದಸ್ಯ ಬಸವರಾಜ ಇಟಗಿ, 2005ರಿಂದಲೂ ಎನ್‌ಡಿಆರ್‌ಎಫ್ ಒಂದೇ ಮಾದರಿಯ ಮಾರ್ಗಸೂಚಿ ಅನುಸರಿಸುತ್ತಿದ್ದು, ಅದೇ ರೀತಿ ಪರಿಹಾರ ನೀಡುತ್ತಿದೆ. ಆದರೆ, ಕಳೆದ ಒಂದೂವರೆ ದಶಕದಲ್ಲಿ ಕಟ್ಟಡಗಳ ಮಾರ್ಗಸೂಚಿ ದರ, ಮಾರುಕಟ್ಟೆ ದರ ಸೇರಿದಂತೆ ಎಲ್ಲವೂ ಸಾಕಷ್ಟು ಏರಿಕೆ ಆಗಿದೆ. ಆದ್ದರಿಂದ ಎನ್‌ಡಿಆರ್‌ಎಫ್ ಮೂಲಕ ನೀಡುವ ಅನುದಾನವನ್ನೂ ಪರಿಷ್ಕರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಬೇಕು ಎಂದು ಆಡಳಿತ ಪಕ್ಷದ ಗಮನಸೆಳೆದರು....

ಫೋಟೋ - http://v.duta.us/wt1XJQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/7Y8qfgAA

📲 Get Karnatakanews on Whatsapp 💬