ಕಲ್ಚರ್ಪೆ ಡಂಪಿಂಗ್‌ ಯಾರ್ಡ್‌ಗೆ ಕಸ: ಪ್ರತಿಭಟನೆ

  |   Dakshina-Kannadanews

ಸುಳ್ಯ/ಅರಂತೋಡು: ಸುಳ್ಯ ನಗರದ ಕಸ ಕಲ್ಚರ್ಪೆ ಡಂಪಿಂಗ್‌ ಯಾರ್ಡ್‌ಗೆ ತಂದು ಹಾಕುತ್ತಿರುವುದನ್ನು ವಿರೋಧಿಸಿ ಸ್ಥಳೀಯ ನಿವಾಸಿಗಳು ಕಲ್ಚರ್ಪೆ (ಸಿರಿಕುರಲ್‌ ನಗರ) ಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಡಿಕೇರಿ ತಾ.ಪಂ. ಸದಸ್ಯ ನಾಗೇಶ್‌ ಕುಂದಲ್ಪಾಡಿ, ಇಲ್ಲಿ ಕಸ ಹಾಕುವ ಪ್ರಸ್ತಾವ ಬಂದಾಗಲೇ ನಾವು ಹೋರಾಟ ನಡೆಸಿದ್ದೆವು. ನ್ಯಾಯಾಲಯದ ಮೆಟ್ಟಿಲೇರಿ ಪ್ರತಿಭಟಿಸಿದ್ದೆವು. ಆದರೆ ಆಗಿನ ಜಿಲ್ಲಾಧಿಕಾರಿ ಅವರು ಆಧುನಿಕ ತಂತ್ರಜ್ಞಾನ ಬಳಸಿ ತ್ಯಾಜ್ಯ ಮರು ಬಳಕೆಗೆ ವ್ಯವಸ್ಥೆ ಮಾಡುವುದಾಗಿ ನ್ಯಾಯಾಲಯದ ಮುಂದೆ ಹೇಳಿದ ಕಾರಣ ನ್ಯಾಯಾಲಯದಲ್ಲಿ ಅವರಿಗೆ ಜಯ ಸಿಕ್ಕಿತ್ತು. ಆದರೆ ಡಿ.ಸಿ. ಅವರು ಈ ತನಕವೂ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇ ಮಾಡಿಲ್ಲ ಎಂದವರು ಆಪಾದಿಸಿದರು.

ನಾವು ಮನುಷ್ಯರಲ್ಲವೇ?

ಅಶೋಕ್‌ ಪೀಚೆ ಮಾತನಾಡಿ, ನಗರದ ಕಸಕ್ಕೆ ದುಗಲಡ್ಕದಲ್ಲಿ ಜಾಗ ಗೊತ್ತು ಮಾಡಿದ ಸಂದರ್ಭ ಸ್ಥಳೀಯ ನಿವಾಸಿಗಳ ಒತ್ತಡಕ್ಕೆ ಮಣಿದ ನ.ಪಂ. ಈಗ ಮತ್ತೆ ಇಲ್ಲಿಗೆ ಕಸ ಹಾಕುತ್ತಿದೆ. ಇದರ ಮಧ್ಯೆ ಅಜ್ಜಾವರದಲ್ಲಿಯೂ ಸ್ಥಳ ಗುರುತಿಸಿದ್ದರೂ ಅಲ್ಲಿಯೂ ವಿರೋಧ ಕಂಡು ಬಂತು. ನ.ಪಂ. ಅಧಿಕಾರಿಗಳಿಗೆ ಆ ಪ್ರದೇಶದ ಜನರು ಮಾತ್ರ ಮನುಷ್ಯರಂತೆ ಕಾಣುತ್ತಾರೆ. ಕಲ್ಚಪೆìಯವರು ಮನುಷ್ಯರಲ್ಲವೇ? ನಮ್ಮ ಬೇಡಿಕೆಯಂತೆ ಇಲ್ಲಿ ಕಸ ಹಾಕಬಾರದು ಎಂದು ಎಚ್ಚರಿಸಿದರು....

ಫೋಟೋ - http://v.duta.us/eDyxxwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/p0b_lwAA

📲 Get Dakshina Kannada News on Whatsapp 💬