ಕೆ.ಸುಧಾಕರ ಅಕ್ರಮ ಆಸ್ತಿಗಳ ಸರದಾರ: ಶಿವಶಂಕರ ರೆಡ್ಡಿ ಆರೋಪ

  |   Karnatakanews

ಚಿಕ್ಕಬಳ್ಳಾಪುರ: ಒಬ್ಬ ನಿವೃತ್ತ ಶಿಕ್ಷಕನ ಮಗ ಕೆಲವೇ ವರ್ಷಗಳಲ್ಲಿ ನೂರಾರು ಕೋಟಿ ಒಡೆಯ ಹೇಗಾದ ಎಂದು ಸುಧಾಕರ್ ಮತ ಕೇಳಲು ಬಂದಾಗ ಮತದಾರರು ಅವರನ್ನು ಪ್ರಶ್ನೆ ಮಾಡಿ ಆತನ ವಿರುದ್ಧ ಧ್ವನಿ ಎತ್ತುವ ಕೆಲಸ ಮಾಡಬೇಕೆಂದು ಮಾಜಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ, ಅನರ್ಹ ಶಾಸಕ ಡಾ.ಕೆ.ಸುಧಾಕರ್ ವಿರುದ್ದ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಜಿ.ಪಂ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಂಗಳವಾರ ಉಪ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಪೆರೇಸಂದ್ರದಲ್ಲಿ ಕೇವಲ ಹತ್ತು ಹನ್ನೆರಡು ಎಕರೆ ಜಮೀನು ಹೊಂದಿದ್ದ ಇವರು ಚಿಕ್ಕಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲ್ಲೂಕು ಸೇರಿದಂತೆ ಹಲವು ಕಡೆ ನೂರಾರು ಎಕರೆ ಭೂಮಿ ಖರೀದಿ ಮಾಡಿದ್ದಾರೆ. ಬೋಗಸ್ ಕಂಪನಿಗಳ ಮುಖಾಂತರ ನೂರಾರು ಕೋಟಿ ವಹಿವಾಟು ನಡೆಸಿ ಸುಮಾರು ಜನಕ್ಕೆ ವಂಚಿಸಿದ್ದು ಕೆಲವೇ ದಿನಗಳಲ್ಲಿ ಈತನ ಬಂಡವಾಳ ಬಯಲಿಗೆ ಬೀಳಲಿದೆ. ಕೊಟ್ಯಾಂತರ ರೂಪಾಯಿಗಳಷ್ಟು ಹಣ ತೆರಿಗೆ ಕಟ್ಟದೆ ಐ.ಟಿ. ಇಲಾಖೆಗೆ ವಂಚಿಸಿದ್ದು ಅದನ್ನು ಮರೆಮಾಚಲು ಈಗ ಬಿಜೆಪಿ ಪಕ್ಷವನ್ನು ಅಪ್ಪಿಕೊಂಡಿದ್ದಾರೆ.ಈ ಕೂಡಲೇ ಐ.ಟಿ ಇಲಾಖೆ ಅಧಿಕಾರಿಗಳು ಸುಧಾಕರ್ ರವರ ಆಸ್ತಿ ವಿವರಗಳನ್ನು ಸಂಗ್ರಹಿಸಿ ಆತನ ಭ್ರಷ್ಟಾಚಾರದ ಬಗ್ಗೆ ಇಲಾಖೆಗೆ ವಂಚಿಸಿರುವುದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು....

ಫೋಟೋ - http://v.duta.us/uX1bVAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/fTd8JQAA

📲 Get Karnatakanews on Whatsapp 💬