ಹೈನೋದ್ಯಮದಿಂದ ಆರ್ಥಿಕ ಲಾಭ

  |   Chikkaballapuranews

ಚಿಕ್ಕಬಳ್ಳಾಪುರ: ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ರೈತ ಕುಟುಂಬಗಳು ಸ್ವಾವಲಂಬಿಗಳಾಗಿ ಬದುಕು ನಡೆಸುತ್ತಿವೆ ಎಂದು ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ತಾಲೂಕು ನಿರ್ದೇಶಕ ಎನ್‌.ಸಿ.ವೆಂಕಟೇಶ್‌ ತಿಳಿಸಿದರು. ನಗರದ ಎಪಿಎಂಸಿ ಆವರಣದ ಕೋಚಿಮುಲ್‌ ಉಪ ಶಿಬಿರ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಡಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ವಿವಿಧ ಸೌಲಭ್ಯ ವಿತರಿಸಿ ಮಾತನಾಡಿದರು.

ಅವಿಭಜಿತ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಎಷ್ಟೇ ಬರಗಾಲ ಇದ್ದರೂ ಜಿಲ್ಲೆಯ ರೈತರನ್ನು ಹೈನೋದ್ಯಮ ಉಳಿಸಿಕೊಂಡು ಬರುತ್ತಿದೆ. ಯಾವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಇರುವುದಿಲ್ಲ. ಆ ಗ್ರಾಮಗಳಲ್ಲಿ ರೈತರ ಅಭಿವೃದ್ಧಿ ಸಾಧ್ಯವಿಲ್ಲ ಎಂದರು. ಹಾಲು ಉತ್ಪಾದನೆಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಪ್ರತಿ ನಿತ್ಯ 11 ಲಕ್ಷ ಲೀಟರ್‌ ಹಾಲು ಉತ್ಪಾದಿಸುತ್ತಿದ್ದೇವೆ.

ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕು ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದ ಅವರು, ಇವತ್ತು ನಂದಿನಿ ಹಾಲು ದೇಶದಲ್ಲಿ ಅಷ್ಟೇ ಅಲ್ಲದೆ ಹೊರ ದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಹಾಲು ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಮಾರುಕಟ್ಟೆಯಲ್ಲಿ ಗುಣಮಟ್ಟದ ನಂದಿನಿ ಹಾಲು ಹಾಗೂ ಅದರ ಉತ್ಪನ್ನ ಕಡಿಮೆ ಬೆಲೆ ದೊರೆಯುತ್ತವೆ. ಪ್ರತಿಯೊಬ್ಬರು ನಂದಿನಿ ಉತ್ಪನ್ನ ಬಳಸಿದರೆ ಪರೋಕ್ಷವಾಗಿ ರೈತರಿಗೆ ಹೆಚ್ಚು ಬೆಂಬಲ ನೀಡಿದಂತಾಗುತ್ತದೆ ಎಂದರು....

ಫೋಟೋ - http://v.duta.us/FsCtnAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/WFD7twAA

📲 Get Chikkaballapura News on Whatsapp 💬