ಇಂದಿನಿಂದ ಒಎಫ್ಸಿ ಅಳವಡಿಕೆ ಬಂದ್‌

  |   Bangalore-Citynews

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಪ್ಟಿಕಲ್‌ ಫೈಬರ್‌ ಕೇಬಲ್‌ (ಒಎಫ್ಸಿ) ಅಳವಡಿಕೆಗೆ ನೀಡಲಾಗಿದ್ದ ಎಲ್ಲ ಅನುಮತಿಗಳನ್ನು ರದ್ದು ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿ ಒಎಫ್ಸಿ ಅಳವಡಿಕೆಯಲ್ಲಿ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಒಎಫ್ಸಿ ಸೇವಾ ಸಂಸ್ಥೆಗೆ ನೀಡಿರುವ ಎಲ್ಲ ಅನುಮತಿ ರದ್ದುಗೊಳಿಸಿ ಮಂಗಳವಾರ ಆದೇಶ ಹೊರಡಿಸಲಾಗಿದೆ.

ಇತ್ತೀಚೆಗೆ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಒಎಫ್ಸಿ ವಿಭಾಗದ ಅಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಲಿಕೆಯಿಂದ ಒಎಫ್ಸಿ ಸೇವಾ ಸಂಸ್ಥೆಗೆ ಕೇಬಲ್‌ ಆಳವಡಿಕೆಗೆ ನೀಡಲಾಗಿರುವ ಎಲ್ಲ ಅನುಮತಿಗಳನ್ನು ರದ್ದುಗೊಳಿಸಿ ಆದೇಶ ಮಾಡಲಾಗಿದೆ.

ಪಾಲಿಕೆಯಿಂದ ಈವರೆಗೆ ಅನುಮತಿ ಪಡೆದ ಮತ್ತು ಚಾಲ್ತಿಯಲ್ಲಿರುವ ಎಲ್ಲ ಕೇಬಲ್‌ ಕಾಮಗಾರಿ ಸ್ಥಗಿತಗೊಳಿಸುವುದಕ್ಕೂ ಸೂಚನೆ ನೀಡಲಾಗಿದ್ದು, ಒಂದು ವೇಳೆ ಪಾಲಿಕೆ ವ್ಯಾಪ್ತಿಯಲ್ಲಿ ಒಎಫ್ಸಿ ಅಳವಡಿಕೆ ಕಂಡು ಬಂದಲ್ಲಿ ಒಎಫ್ಸಿ ಸೇವಾ ಸಂಸ್ಥೆ ಮತ್ತು ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಒಎಫ್ಸಿ ವಿಭಾಗದ ಮುಖ್ಯಎಂಜಿನಿಯರ್‌ ಎಂ.ವಿ. ಪ್ರಸಾದ್‌ ತಿಳಿಸಿದ್ದಾರೆ.

ಏರ್‌ಟೆಲ್‌ ಸಂಸ್ಥೆಯಿಂದ ಸ್ಪಷ್ಟನೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಎಫ್ಸಿ ಅಳವಡಿಸುವಲ್ಲಿ ತನ್ನಿಂದ ಯಾವುದೇ ಲೋಪವಾಗಿಲ್ಲ ಎಂದು ಭಾರತಿ ಏರ್‌ಟೆಲ್‌ ಸಂಸ್ಥೆ ಸ್ಪಷ್ಟನೆ ನೀಡಿದೆ. ಒಎಫ್ಸಿ ಅಳವಡಿಸುವುದಕ್ಕೆ ಬಿಬಿಎಂಪಿಯಿಂದ ಎಲ್ಲ ರೀತಿಯ ಪೂರ್ವಾನುಮತಿ ಹಾಗೂ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಫೋಟೋ - http://v.duta.us/61HZxAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/L89erQAA

📲 Get Bangalore City News on Whatsapp 💬