ಉಪ ಚುನಾವಣೆಯಲ್ಲಿ ಬಿಜೆಪಿಗೆ 15 ಕ್ಷೇತ್ರಗಳಲ್ಲಿ ಗೆಲುವು: ಸಿಎಂ ಬಿ.ಎಸ್ ಯಡಿಯೂರಪ್ಪ

  |   Karnatakanews

ಬೆಳಗಾವಿ: ರಾಜ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು ಅಕ್ಟೋಬರ್ 22 ರಂದು ಅನರ್ಹ ಶಾಸಕರ ಪ್ರಕರಣದ ತೀರ್ಪು ಬರುವ ನಿರೀಕ್ಷೆ ಇದೆ. ಅದನ್ನು ನೋಡಿಕೊಂಡು ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವದು. ಈ ಉಪಚುನಾವಣೆ ಬಹಳ ಮಹತ್ವದ್ದು. ಈ ಹಿನ್ನೆಲೆಯಲ್ಲಿ ಪ್ರತಿ ಕ್ಷೇತ್ರಕ್ಕೆ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಅಥವಾ ಗೊಂದಲ ಇಲ್ಲ. ಇದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನಾವು 15 ಸ್ಥಾನಗಳನ್ನು ಗೆಲ್ಲುವುದು ಸತ್ಯ ಎಂದರು.

ರಾಜ್ಯ ಸರಕಾರದ ಮುಂದೆ ಹೊಸ ಸಾಲಮನ್ನಾ ಮಾಡುವ ವಿಚಾರ ಇಲ್ಲ. ಆದರೆ ಹಿಂದಿನ ಸರಕಾರ ಮಾಡಿದ ಸಾಲಮನ್ನಾ ಯೋಜನೆಯಲ್ಲಿ ಬಾಕಿ ಉಳಿದಿದ್ದರೆ ಅದನ್ನು ಪೂರ್ಣಗೊಳಿಸಲಾಗುವದು. ಈಗ ನೆರೆ ಹಾವಳಿ ಸಂತ್ರಸ್ತರಿಗೆ ದೊಡ್ಡಮಟ್ಟದಲ್ಲಿ ಪರಿಹಾರ ನೀಡಲಾಗುತ್ತಿದೆ. ಹೀಗಾಗಿ ಎಲ್ಲದಕ್ಕೂ ಹಣ ಸರಿದೂಗಿಸುವ ಜವಾಬ್ದಾರಿ ಸರಕಾರದ ಮೇಲಿದೆ. ಇದೇ ಕಾರಣದಿಂದ ಹೊಸ ಸಾಲಮನ್ನಾ ಯೋಜನೆ ಪ್ರಕಟಿಸುವ ವಿಚಾರ ಇಲ್ಲ ಎಂದು ಸ್ಪಷ್ಟಪಡಿಸಿದರು.

ಫೋಟೋ - http://v.duta.us/4aucSQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/KE7K3AAA

📲 Get Karnatakanews on Whatsapp 💬