ಚಿತ್ತಾಪುರ ಪುರಸಭೆ ಸದಸ್ಯರಿಗಿಲ್ಲ ಅಧಿಕಾರ

  |   Kalburaginews

„ಎಂ.ಡಿ ಮಶಾಖ

ಚಿತ್ತಾಪುರ: ಪಟ್ಟಣದ 23 ವಾರ್ಡ್‌ಗಳ ಚುನಾವಣೆ ಫಲಿತಾಂಶ ಹೊರಬಿದ್ದು ಒಂದು ವರ್ಷವೇ ಕಳೆದರೂ ಇಲ್ಲಿಯವರೆಗೆ ಚುನಾಯಿತ ಸದಸ್ಯರ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿಲ್ಲ. ಇದರಿಂದಾಗಿ ಪಟ್ಟಣದಲ್ಲಿ ಹಲವು ಸಮಸ್ಯೆಗಳು ತಾಂಡವವಾಡುತ್ತಿವೆ. ತಮ್ಮ ಸಮಸ್ಯೆಗಳನ್ನು ಯಾರಿಗೆ ಹೇಳಿಕೊಳ್ಳಬೇಕು ಎಂಬ ಗೊಂದಲ ಸಾರ್ವಜನಿಕರಲ್ಲಿ ಉಂಟಾಗಿದೆ.

ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಆಕಾಂಕ್ಷಿಗಳಿಗೆ ಅಧಿಕಾರ ಭಾಗ್ಯ ಈಗಲೂ ದೂರವೇ ಉಳಿದಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಹಣ ಹಿಡಿದಿದೆ. ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹಾಗಾಗಿ ಸದ್ಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನನೆಗುದ್ದಿಗೆ ಬಿದ್ದಿದೆ.

ಅಧ್ಯಕ್ಷ-ಉಪಾಧ್ಯಕ್ಷರ ಮೀಸಲು ಪಟ್ಟಿಯನ್ನು ಫಲಿತಾಂಶ ಪ್ರಕಟವಾದ 2018 ಸೆ.3ರಂದೇ ರಾಜ್ಯ ಸರ್ಕಾರ ಪ್ರಕಟಿಸಿತ್ತು. ಫಲಿತಾಂಶದ ಚಿತ್ರಣ ನಿಚ್ಚಳವಾದ ಬಳಿಕ ಸೆ.6ರಂದು ಪರಿಷ್ಕೃತ ಮೀಸಲು ಪಟ್ಟಿ ಪ್ರಕಟಿಸಲಾಯಿತು. ಪರಿಷ್ಕೃತ ಮೀಸಲು ಪಟ್ಟಿ ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ತಡೆ ಬಿದ್ದಿದೆ.

ಒಟ್ಟು 23 ವಾರ್ಡ್‌ ಹೊಂದಿರುವ ಪುರಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 18, ಬಿಜೆಪಿ 5 ಸ್ಥಾನ ಗಳಿಸಿವೆ. ಹೀಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಇದೆ. ಅಧ್ಯಕ್ಷ ಸ್ಥಾನಕ್ಕೆ (ಬಿಸಿಎ) ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾದ ಒಬ್ಬರು, ಉಪಾಧ್ಯಕ್ಷ ಸ್ಥಾನಕ್ಕೆ (ಸಾಮಾನ್ಯ) ಸಂಬಂಧಿಸಿದಂತೆ ಒಬ್ಬರು ಆಗುತ್ತಾರೆ. ಆದರೆ ಅಧ್ಯಕ್ಷ-ಉಪಾಧ್ಯಕ್ಷ ಯಾರಾಗುತ್ತಾರೆ ಎಂಬ ಪ್ರಶ್ನೆ ಕಾಡುತ್ತಿದೆ. ಆದರೆ ಪ್ರಸಕ್ತ ಮೀಸಲಿಗೆ ನ್ಯಾಯಾಲಯದ ತಡೆ ಇದೆ. ಚುನಾಯಿತ ಸದಸ್ಯರು ಮಾತ್ರ ಮೀಸಲಾತಿ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ....

ಫೋಟೋ - http://v.duta.us/S67pSAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/FhwTDAAA

📲 Get Kalburagi News on Whatsapp 💬