ಜಾನುವಾರು ಆರೋಗ್ಯಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿ: ಶಾಸಕ

  |   Dharwadnews

ಕಲಘಟಗಿ: ರೈತ ವರ್ಗದ ಬಾಳ ಸಂಗಾತಿ ಜಾನುವಾರುಗಳಲ್ಲಿ ಹರಡುವ ಕಾಲು ಬಾಯಿ ರೋಗ ನಿರ್ಮೂಲನೆ ಗುರಿ ಹೊಂದಿರುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಗೊಳಿಸಲು ಪಶುಪಾಲನಾ ಇಲಾಖೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು.

ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯಡಿ ತಾಲೂಕಿನಾದ್ಯಂತ ಜರುಗಲಿರುವ 16ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಪಟ್ಟಣದ ಪಶುಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಕಳೆದ 2-3 ವರ್ಷಗಳಲ್ಲಿ ಕಲಘಟಗಿ ಮತಕ್ಷೇತ್ರದಲ್ಲಿ ಈ ರೋಗಗಳು ಕಾಣಿಸಿಕೊಂಡ ವರದಿಯಾಗಿಲ್ಲ. ಮುಂಬರುವ ದಿನಗಳಲ್ಲಿಯೂ ಈ ರೋಗಗಳು ಕಾಣಿಸಿಕೊಳ್ಳದಂತೆ ಜಾಗೃತಿ ವಹಿಸಿ ಕಾರ್ಯನಿರ್ವಹಿಸಬೇಕು. ಎಲ್ಲ ರೈತ ಬಾಂಧವರು ಸಹಕರಿಸಿ ತಮ್ಮಲ್ಲಿರುವ ಎಲ್ಲ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದರು.

ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ| ಎಸ್‌.ವಿ. ಸಂತಿ ಮಾತನಾಡಿ, ಅ. 14 ರಿಂದ ನ. 4ರ ವರೆಗೆ ನಡೆವ ಅಭಿಯಾನದಲ್ಲಿ ರೈತರ ಮನೆ ಬಾಗಿಲಿಗೆ ಹೊಗಿ ಲಸಿಕೆ ಹಾಕುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕಾಗಿ 7 ಲಸಿಕಾ ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡದಲ್ಲಿ 5ರಂತೆ ಒಟ್ಟು 35 ಲಸಿಕೆದಾರರು ಗ್ರಾಮವಾರು ಸಿದ್ಧಪಡಿಸಿದ ವೇಳಾಪಟ್ಟಿಯಂತೆ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಲಸಿಕೆ ಹಾಕಲಿದ್ದಾರೆ ಎಂದು ತಿಳಿಸಿದರು.

ಫೋಟೋ - http://v.duta.us/zs-nbAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/g_l48gAA

📲 Get Dharwad News on Whatsapp 💬