ಪಿಯು ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ಎಚ್ಚರವಹಿಸಿದ್ದೇವೆ

  |   Karnatakanews

ಬೆಂಗಳೂರು: ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಮತ್ತು ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಯಾವುದೇ ಕಾರಣಕ್ಕೂ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಕೂಡದು, ಸಾಮೂಹಿಕ ನಕಲು ಸಹಿತವಾಗಿ ಯಾವುದೇ ರೀತಿಯ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರ ವಹಿಸುವ ಸಂಬಂಧ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೌಲ್ಯಮಾಪನ ಕಾರ್ಯವನ್ನು ಎಚ್ಚರಿಕೆಯಿಂದ ಮಾಡಬೇಕು, ತಪ್ಪು ಮೌಲ್ಯಮಾಪನದಿಂದ ಯಾವ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ನಿಗಾ ವಹಿಸಬೇಕು ಎಂದು ಪಿಯು ಇಲಾಖೆ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದೇವೆ ಮತ್ತು ಅಧಿಕಾರಿಗಳ ಸಭೆ ಕೂಡ ಕರೆದು ಚರ್ಚಿಸಿದ್ದೇವೆ ಎಂದರು.

ಕಿಂಗ್‌ಪಿನ್‌ಗಳ ಮೇಲೆ ನಿಗಾ

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಪೂರ್ಣವಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಿಂಗ್‌ಪಿನ್‌ಗಳ ಮೇಲೆ ನಿಗಾ ವಹಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯ ಅಧಿಕಾರಿಗಳ ಜತೆಗೂ ಮಾತುಕತೆ ನಡೆಸಿದ್ದೇವೆ. ಕಿಂಗ್‌ಪಿನ್‌ಗಳು ಹೊರಗೆ ಬಾರದಂತೆ ಎಲ್ಲ ರೀತಿಯ ಕ್ರಮ ವಹಿಸಲು ಪೊಲೀಸ್‌ ಇಲಾಖೆಗೂ ತಿಳಿಸಿದ್ದೇವೆ ಎಂದು ಮಾಹಿತಿ ನೀಡಿದರು....

ಫೋಟೋ - http://v.duta.us/a01ABAEA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/1j9MBAAA

📲 Get Karnatakanews on Whatsapp 💬