ಪಾಲಿಕೆ "ವಿಸರ್ಜಿಸುವ' ಬಗ್ಗೆ ಪರಿಶೀಲಿಸಿ!

  |   Bangalore-Citynews

ಬೆಂಗಳೂರು: ನಗರದಲ್ಲಿ ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ವಿಚಾರದಲ್ಲಿ ನಿರಂತರವಾಗಿ ವಿಫ‌ಲವಾಗಿರುವ ಮತ್ತು ವ್ಯಾಪಕ ಪ್ರಮಾಣದಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಬಿಬಿಎಂಪಿಯನ್ನು "ವಿಸರ್ಜನೆ' ಮಾಡುವ ಕಾನೂನು ಕ್ರಮದ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ನಿಯಮಗಳು-2000 ಮತ್ತು 2016, ನಿರ್ಮಾಣ ಮತ್ತು ತೆರವು ನಿಯಮಗಳು-2016, ಮಾಲಿನ್ಯ ತಡೆ ನಿಯಮಗಳು-1986 ಸೇರಿದಂತೆ ಇತರ ಕಾಯ್ದೆ ಮತ್ತು ಕಾನೂನು ನಿಯಮಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸತತವಾಗಿ ವಿಫ‌ಲವಾಗಿರುವುದರ ಜೊತೆಗೆ ಕಾನೂನುದತ್ತ ಅಧಿಕಾರ ಚಲಾಯಿಸುವಲ್ಲಿ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವಿರುದ್ಧ "ಕರ್ನಾಟಕ ಮುನ್ಸಿಪಲ್‌ ಕಾಯ್ದೆ-1976ರ ಸೆಕ್ಷನ್‌ 99(1) ಪ್ರಕಾರ ಪಾಲಿಕೆಯನ್ನು ವಿಸರ್ಜನೆ ಮಾಡುವ ಕಾನೂನು ಅಧಿಕಾರ ರಾಜ್ಯ ಸರ್ಕಾರಕ್ಕಿದೆ.

ಈ ಕುರಿತು ಪರಾಮರ್ಶೆ ನಡೆಸಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣೆಗೆ ಸಂಬಂಧಿಸಿದಂತೆ 2013ರಲ್ಲಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಬಿಬಿಎಂಪಿ, ಮಾಲಿನ್ಯ ನಿಯಂತ್ರಣ ಮಂಡಳಿಗೆ ಕೆಲವು ಮಹತ್ವದ ನಿರ್ದೇಶನಗಳನ್ನು ನೀಡಿ, ಮಂಗಳವಾರ ವಿಸ್ತೃತ ಆದೇಶ ಮಾಡಿದೆ....

ಫೋಟೋ - http://v.duta.us/Gwk7YQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/U9agxwEA

📲 Get Bangalore City News on Whatsapp 💬