ಪ್ಲಾಸ್ಟಿಕ್‌ ಮುಕ್ತ ಗ್ರಾಮ ನಿರ್ಮಾಣಕ್ಕೆ ನಿರ್ಧಾರ: ಸಿಇಒ

  |   Bagalkotnews

ಬಾಗಲಕೋಟೆ: ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ರಚಿಸಲಾದ ಗ್ರಾಪಂ ಒಕ್ಕೂಟಗಳು ಹಾಗೂ ಸ್ವ-ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಎಲ್ಲ ಗ್ರಾಮಗಳನ್ನು ಪ್ಲಾಸ್ಟಿಕ್‌ ಮುಕ್ತವನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿ.ಪಂ. ಸಿಇಒ ಗಂಗೂಬಾಯಿ ಮಾನಕರ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ಲಾಸ್ಟಿಕ್‌ ಚೀಲ ಬದಲಾಗಿ ಬಟ್ಟೆ ಚೀಲ ಬಳಸಲು ಸೂಚಿಸಲಾಗಿದೆ. ಇದಕ್ಕಾಗಿ ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರಿಂದ ಬಟ್ಟೆ, ಪೇಪರ್‌ ಚೀಲ ತಯಾರಿಸಲು ತರಬೇತಿ ನೀಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಸ್ವ-ಉದ್ಯೋಗ ಕಲ್ಪಿಸುವ ಜೊತೆಗೆ ಪ್ಲಾಸ್ಟಿಕ್‌ ಮುಕ್ತವನ್ನಾಗಿಸಲು ಮಹಿಳೆಯರಿಗೆ ಪ್ರೋತ್ಸಾಹಿಸಲಾಗುತ್ತಿದೆ. ಪ್ಲಾಸ್ಟಿಕ್‌ ಮುಕ್ತ ಅಭಿಯಾನದಲ್ಲಿಯೂ ಮಹಿಳೆಯರನ್ನು ತೊಡಗಿಸಿಕೊಂಡು ಅರಿವು ಮೂಡಿಸಲಾಗುತ್ತಿದೆ ಎಂದರು.

ಗ್ರಾಮೀಣ ಭಾಗದಲ್ಲಿ ತ್ಯಾಜ್ಯ ಸಂಗ್ರಹ: ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಗ್ರಾ.ಪಂಗಳಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಘನ ಮತ್ತು ದ್ರವ್ಯ ತ್ಯಾಜ್ಯವನ್ನು ಮನೆ ಮನೆಗೆ ಹೋಗಿ ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯ ಯಡಹಳ್ಳಿ ಮತ್ತು ಹಿರೇಪಡಸಲಗಿ ಗ್ರಾಮದಲ್ಲಿ ನಡೆದಿದೆ. ತ್ಯಾಜ್ಯ ಸಂಗ್ರಹಿಸಲು 15 ಗ್ರಾ.ಪಂಗಳಲ್ಲಿ ಸ್ಥಳ ಗುರುತಿಸಲಾಗಿದೆ. ಅಲ್ಲದೇ ತ್ಯಾಜ್ಯ ಬೇರ್ಪಡಿಸುವ ಘಟಕ, ಕಸ ಸಾಗಾಣಿಕೆ ವಾಹನ ಖರೀದಿಸಲು ಹಾಗೂ ಪ್ರತಿ ಮನೆಗೆ ಕಸದ ಬುಟ್ಟಿ ಖರೀದಿಸಲು ಪ್ರತಿ ಪಂಚಾಯತಿಗೆ 10 ಲಕ್ಷ ರೂ.ಗಳಂತೆ ಒಟ್ಟು 150 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು....

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/yaaWpwAA

📲 Get Bagalkot News on Whatsapp 💬