ಬೆಳೆ ಹಾನಿಗೆ ಹತ್ತು ಸಾವಿರ ಹೆಚ್ಚುವರಿ ಪರಿಹಾರ: ಸಿಎಂ

  |   Karnatakanews

ಬೆಂಗಳೂರು/ಬೆಳಗಾವಿ: ನೆರೆಯಿಂದ ಹಾನಿಗೊಳಗಾದ ಒಣ ಹಾಗೂ ನೀರಾವರಿ ಆಶ್ರಿತ ಬೆಳೆಗಳಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಹತ್ತು ಸಾವಿರ ರೂ. ಪರಿಹಾರ ನೀಡಲಿದೆ ಎಂದು ಸಿಎಂ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಒಣ ಬೇಸಾಯದ ಬೆಳೆಗೆ ಈ ಮುಂಚೆ ಆರು ಸಾವಿರ ಹಾಗೂ ನೀರಾವರಿ ಬೆಳೆಗೆ 13 ಸಾವಿರ ರೂ. ಪರಿಹಾರ ನೀಡಲಾಗುತ್ತಿತ್ತು.

ಇದೇ ಮೊದಲ ಸಲ ಹತ್ತು ಸಾವಿರ ರೂ. ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದರು. ಪ್ರವಾಹದಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಿಸಲು ಈಗಾಗಲೇ ಐದು ಲಕ್ಷ ರೂ. ಪರಿಹಾರ ಘೋಷಿಸಲಾಗಿದ್ದು, ಇಷ್ಟೊಂದು ಪರಿಹಾರ ನೀಡುತ್ತಿರುವುದು ಕೂಡ ಇದೇ ಮೊದಲ ಬಾರಿ. ಔರಾದಕರ್‌ ವರದಿಯನ್ನು ತಕ್ಷಣ ಜಾರಿ ಮಾಡಲಾಗುವುದು.

ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸುವ ಬಗ್ಗೆ ಚರ್ಚೆ ನಡೆದಿದ್ದು, ಸಮಗ್ರವಾಗಿ ಚರ್ಚಿಸಿದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.ಮಹಾರಾಷ್ಟ್ರ ರಾಜ್ಯದ ಪ್ರವಾಸದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಮಂಗಳವಾರ ಸಂಜೆ ನಗರಕ್ಕೆ ಆಗಮಿಸಿದ್ದು, ಅ.16ರಂದು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ....

ಫೋಟೋ - http://v.duta.us/PbaSpQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/K7ZDdQAA

📲 Get Karnatakanews on Whatsapp 💬