ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನ. 18ರವರೆಗೆ ವಿಸ್ತರಣೆ

  |   Gadagnews

ಗದಗ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯನ್ನು ನ. 18ರವರೆಗೆ ವಿಸ್ತರಿಸಿದೆ. ಈ ಅವಧಿಯೊಳಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಲು ರಾಜ್ಯ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಾರ್ಯದರ್ಶಿಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕ ಡಾ| ಎಸ್‌. ಸೆಲ್ವಕುಮಾರ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇ.ವಿ.ಪಿ ತಂತ್ರಾಂಶದಲ್ಲಿ ಮತದಾರರ ಪರಿಶೀಲನಾ ಕಾರ್ಯಕ್ರಮದಡಿ ಗದಗ ಜಿಲ್ಲೆಯ ಪ್ರಗತಿ ನಿಧಾನವಾಗಿದೆ. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವೈಯಕ್ತಿಕ ವಿವರಗಳನ್ನು ಪರಿಶೀಲಿಸಿಕೊಳ್ಳಲು ಹಾಗೂ 01-01-2020ಕ್ಕೆ 18 ವರ್ಷ ಪೂರ್ಣಗೊಳ್ಳುವ ಹೊಸ ಮತದಾರರ ಹೆಸರು ಸೇರ್ಪಡೆಗೆ ಅಗತ್ಯದ ಕ್ರಮ ಜರುಗಿಸಬೇಕು. ಹೊಸ ಯುವ ಮತದಾರರ ಸೇರ್ಪಡೆ ಕುರಿತು ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯಕ್ರಮ ತೀವ್ರಗೊಳಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಮತದಾರರ ಸಂಕ್ಷಿಪ್ತ ಪರಿಶೀಲನೆಗೆ ಹಾಗೂ ಹೊಸ ಮತದಾರರ ಸೇರ್ಪಡೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಗತ್ಯದ ಪ್ರಚಾರ ಕಾರ್ಯಕ್ರಮವನ್ನು ಕೈಗೊಂಡು ಪ್ರಗತಿ ಸಾಧಿಸಲಾಗುತ್ತಿದೆ ಎಂದರು....

ಫೋಟೋ - http://v.duta.us/uMGGuAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/MTePJgAA

📲 Get Gadag News on Whatsapp 💬