ಮಾದಕ ವ್ಯಸನದಿಂದ ಅಂತರ ಕಾಯ್ದುಕೊಳ್ಳಿ

  |   Bidarnews

ಬೀದರ: ಭವಿಷ್ಯವನ್ನು ನಾಶ ಮಾಡುವ ಮಾದಕ ವ್ಯಸನಗಳಿಂದ ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶೆ ಮನಗೂಳಿ ಪ್ರೇಮಾವತಿ ಹೇಳಿದರು.

ನಗರದ ಝೀರಾ ಫಂಕ್ಷನ್‌ ಹಾಲ್‌ನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಮಾದಕ ಔಷಧ/ಮದ್ದು ದುರ್ಬಳಕೆಗೆ ಬಲಿಯಾದವರಿಗೆ ಕಾನೂನು ಸೇವೆಗಳು ಮತ್ತು ಮಾದಕ ಔಷಧ ವಿಪತ್ತಿನ ನಿರ್ಮೂಲನೆ ಯೋಜನೆ-2015ರ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತಿಚೀನ ದಿನಗಳಲ್ಲಿ ಶಾಲಾ-ಕಾಲೇಜಿನಲ್ಲಿ ಮಾದಕ ವಸ್ತುಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಸಾಕಷ್ಟು ವಿದ್ಯಾರ್ಥಿಗಳ ಬದುಕು ನಾಶವಾಗಿದೆ.

ದೇಶದ ಸಂಪತ್ತು ಎಂದು ಕರೆಸಿಕೊಳ್ಳುವ ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಮಾದಕ ವಸ್ತುಗಳ ಬಳಕೆಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ಮನುಷ್ಯ ಆರೋಗ್ಯವಾಗಿರಲು ದೈಹಿಕ ಮತ್ತು ಮಾನಸಿಕವಾಗಿ ಸದೃಢನಾಗಿರಬೇಕು. ಮಾದಕ ವಸ್ತುಗಳ ಸೇವನೆಯಿಂದಾಗಿ ಮಾನಸಿಕ ಆರೋಗ್ಯ ಕುಂಠಿತವಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದಾಗುವ ಹಾನಿಯ ಬಗ್ಗೆ ತಿಳಿದುಕೊಂಡು ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.

ಡಿವೈಎಸ್‌ಪಿ ಬಸವೇಶ್ವರ ಹೀರಾ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಉನ್ನತ ಗುರಿ ಇಟ್ಟುಕೊಂಡು ಸಾಧನೆಗೆ ನಿರಂತರ ಶ್ರಮಿಸಬೇಕು. ಮಾದಕ ವಸ್ತುಗಳ ಸೇವನೆ, ಸಂಗ್ರಹಣೆ, ಮಾರಾಟ ಹಾಗೂ ಪ್ರೋತ್ಸಾಹಿಸುವುದು ಕಾನೂನು ಬಾಹಿರ ಚಟುವಟಿಕೆ ಎಂದು ವಿವರಿಸಿದರು....

ಫೋಟೋ - http://v.duta.us/-Y41WAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/OEPg6gAA

📲 Get Bidar News on Whatsapp 💬