ಯಶಸ್ವಿ ಉದ್ಯಮಿಗೆ ಬೇಕಿದೆ ತರಬೇತಿ

  |   Davanagerenews

ದಾವಣಗೆರೆ: ಯಾವುದೇ ವ್ಯಕ್ತಿ ಹುಟ್ಟಿನಿಂದಲೇ ಉದ್ಯಮಿಯಾಗಿರುವುದಿಲ್ಲ. ಉತ್ತಮ ತರಬೇತಿಯಿಂದ ಮಾತ್ರ ಯಶಸ್ವಿ ಉದ್ಯಮಿಯಾಗಲು ಸಾಧ್ಯ ಎಂದು ಸಿಡಾಕ್‌ ಜಂಟಿ ನಿರ್ದೇಶಕ ಆರ್‌.ಪಿ. ಪಾಟೀಲ್‌ ಹೇಳಿದ್ದಾರೆ.

ನಗರದ ನಿಟ್ಟುವಳ್ಳಿಯ ಭಗೀರಥ ಸರ್ಕಲ್‌ನಲ್ಲಿರುವ ಪ್ರಧಾನಮಂತ್ರಿ ಕೌಶಲ್ಯ ತರಬೇತಿ ಸಂಸ್ಥೆಯಲ್ಲಿ ಸಿಡಾಕ್‌ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಹಾಗೂ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದ ಸಹಯೋಗದೊಂದಿಗೆ ಮಂಗಳವಾರ ಏರ್ಪಡಿಸಲಾಗಿದ್ದ ಕೌಶಲ್ಯ ಉದ್ಯೋಗ ಔಟ್‌ರೀಚ್‌ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಸಾಮಾನ್ಯ ವ್ಯಕ್ತಿಯೂ ಸಹ ದೊಡ್ಡ ಉದ್ಯಮಿಯಾಗುವ ಅವಕಾಶಗಳಿವೆ.

ವ್ಯಕ್ತಿ ತನ್ನ ಆಸಕ್ತಿಯ ಔದ್ಯಮಿಕ ವಿಷಯದ ಬಗ್ಗೆ ಅಗತ್ಯವಾದ ತರಬೇತಿ ಮತ್ತು ಮಾರ್ಗದರ್ಶನ ಪಡೆಯುವುದರ ಮೂಲಕ ಯಶಸ್ವಿ ಉದ್ಯಮಿಯಾಗಬಹುದು ಎಂದರು.

ಪ್ರಧಾನಮಂತ್ರಿ ಉದ್ಯೋಗ ಕೌಶಲ್ಯ ಕೇಂದ್ರವು ಒಂದು ಕೌಶಲ್ಯ ಆಧಾರಿತ ತರಬೇತಿ ಕೇಂದ್ರವಾಗಿದ್ದು, ಉದ್ಯೋಗ ಆಧಾರಿತ ತರಬೇತಿ ನೀಡುವುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

1992ರ ಮೇ 15ರಂದು ನಮ್ಮ ಸಂಸ್ಥೆ ಧಾರವಾಡದಲ್ಲಿ ಸ್ಥಾಪನೆಯಾಗಿ ಇಂದು ಹಲವಾರು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಅನೇಕ ಯುವಕ-ಯುವತಿಯರಿಗೆ ತರಬೇತಿ ನೀಡುವುದರ ಮೂಲಕ ಸ್ವಂತ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಹಾಯಕವಾಗಿದೆ. ಕೌಶಲ್ಯ ಉದ್ಯೋಗ ಔಟ್‌ರೀಚ್‌ ತರಬೇತಿ ಕಾರ್ಯಕ್ರಮದಲ್ಲಿ ಉದ್ಯಮಶೀಲತೆ ತಿಳಿವಳಿಕೆ, ವ್ಯವಹಾರ ಅಭಿವೃದ್ಧಿ, ವ್ಯವಹಾರ ನಿರ್ವಹಣೆ ಬಗ್ಗೆ ತಿಳಿಸಿಕೊಡಲಾಗುತ್ತದೆ....

ಫೋಟೋ - http://v.duta.us/ds7A-AAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Nl1N1AAA

📲 Get Davanagere News on Whatsapp 💬