ರೈತ ಮಹಿಳೆಯರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ

  |   Gadagnews

ನರಗುಂದ: ಸಾವಯವ ಮತ್ತು ಅರಣ್ಯ ಕೃಷಿಯಲ್ಲಿ ಉತ್ತಮ ಸಾಧನೆ ತೋರಿ ರೈತರಿಗೆ ಮಾದರಿಯಾದ ಇಬ್ಬರು ಪ್ರಗತಿಪರ ರೈತ ಮಹಿಳೆಯರಿಗೆ ತಾಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ನಮ್ಮೂರ ಜಾತ್ರೆ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಶ್ರೀಮಠದ ವತಿಯಿಂದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಸಿ.ಸಿ. ಪಾಟೀಲ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ತೋಟಗಾರಿಕೆಯಲ್ಲಿ ಅರಣ್ಯ ಕೃಷಿ ಮೂಲಕ ರೈತರಿಗೆ ಮಾದರಿಯಾದ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಪ್ರಗತಿ ಸಾಧಿಸಿದ ತಾಲೂಕಿನ ಸಂಕದಾಳ ಗ್ರಾಮದ ಪ್ರಗತಿಪರ ರೈತ ಮಹಿಳೆ ನೀಲಾಂಬಿಕಾ ಲಿಂನಗೌಡ್ರ ಹಾಗೂ ಸಾವಯವ ಕೃಷಿಯಲ್ಲಿ ಬಹು ಬೆಳೆ ಪದ್ಧತಿಯಲ್ಲಿ ಅಪ್ರತಿಮ ಸಾಧನೆಗೈದ ತಾಲೂಕಿನ ಕೊಣ್ಣೂರ ಗ್ರಾಮದ ಪ್ರಗತಿಪರ ರೈತ ಮಹಿಳೆ ಯಲ್ಲವ್ವ ಪೂಜಾರ ಅವರಿಗೆ ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದೊರೆಸ್ವಾಮಿ ವಿರಕ್ತ  ಮಠದ ಶ್ರೀ ಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವರ ಸೀಗಿಹಳ್ಳಿ ಗುರು ಮಡಿವಾಳೇಶ್ವರ ಮಠದ ಶ್ರೀ ವೀರೇಶ್ವರ ದೇವರು ಸಮ್ಮುಖ ವಹಿಸಿದ್ದರು. ವಿಮಲಾ ಚಲವಾದಿ, ಡಾ| ಶರಣು ಗೋಗೇರಿ ಇದ್ದರು.

ಫೋಟೋ - http://v.duta.us/MQChqQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/PPfiqAAA

📲 Get Gadag News on Whatsapp 💬