ಹೆದ್ದಾರಿ ದುರಸ್ತಿ: ಡಿಸಿಗೆ ವರದಿ ಸಲ್ಲಿಸಲು ನಳಿನ್‌ ಸೂಚನೆ

  |   Dakshina-Kannadanews

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತು ಇತರ ಕಾರಣಗಳಿಗೆ ಗುಂಡಿ ಬಿದ್ದಿರುವ ಹೆದ್ದಾರಿಯನ್ನು ತತ್‌ಕ್ಷಣವೇ ದುರಸ್ತಿ ಗೊಳಿಸುವ ಜತೆಗೆ ಈ ಕುರಿತ ಪ್ರಗತಿ ಪರಿಶೀಲನ ವರದಿಯನ್ನು ಜಿಲ್ಲಾಧಿಕಾರಿಗೆ ನೀಡುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ರಸ್ತೆಗಳ ದುರಸ್ತಿ ಬಗ್ಗೆ ಇಲಾಖಾಧಿಕಾರಿಗಳ ಸಭೆಯಲ್ಲಿ ಸಂಸದರು ಈ ಸೂಚನೆ ನೀಡಿದ್ದಾರೆ.

ಬಿ.ಸಿ. ರೋಡ್‌ನಿಂದ ಸುರತ್ಕಲ್‌ವರೆಗಿನ ಹೆದ್ದಾರಿ ಹದಗೆಟ್ಟಿದ್ದು, ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಳೆ ಕಡಿಮೆಯಾದರೂ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ಸಮಯ ಬೇಕು ಎಂದು ಅಧಿಕಾರಿಗಳನ್ನು ನಳಿನ್‌ ಪ್ರಶ್ನಿಸಿದರು. ಪ್ರತಿಕ್ರಿಯಿಸಿದ ಅಧಿ ಕಾರಿಗಳು, ಮಂಗಳೂರು- ಸುರತ್ಕಲ್‌ ಹೆದ್ದಾರಿಯಲ್ಲಿ ಮುಂದಿನ 10 ದಿನಗಳೊಳಗೆ ಮತ್ತು ಬಿ.ಸಿ.ರೋಡ್‌ನಿಂದ ಮಂಗಳೂರು ವರೆಗೆ ಈ ತಿಂಗಳ ಅಂತ್ಯದೊಳಗೆ ಗುಂಡಿ ಮುಚ್ಚಲಾಗುವುದು ಎಂದು ತಿಳಿಸಿದರು.

ಪಂಪ್‌ವೆಲ್‌, ಮೂಲ್ಕಿ, ಉಳ್ಳಾಲ ಸರ್ವೀಸ್‌ ರಸ್ತೆ ಕೂಡ ಗುಂಡಿ ಬಿದ್ದಿದ್ದು, ಸಂಚಾರ ಕಷ್ಟವಾಗಿದೆ. ಪ್ರತೀ ದಿನ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ರಸ್ತೆಗುಂಡಿಯಿಂದ ವಾಹನ ಸವಾರರು ಅಪಘಾತಕ್ಕೆ ಒಳಗಾದರೆ ನಿಮ್ಮ ಮೇಲೆಯೇ ಕ್ರಿಮಿನಲ್‌ ಕೇಸ್‌ ಹೂಡಬೇಕಾಗುತ್ತದೆ ಎಂದು ಹೆದ್ದಾರಿ ಅಧಿಕಾರಿಗಳಿಗೆ ಸಂಸದರು ಕಠಿನ ಎಚ್ಚರಿಕೆ ನೀಡಿದರು. ಇನ್ನೆರಡು ದಿನಗಳೊಳಗಾಗಿ ಕೆಲಸ ಪ್ರಾರಂಭಿಸುತ್ತೇವೆ ಎಂದು ಅಧಿಕಾರಿ ಗಳು ಭರವಸೆ ನೀಡಿದರು....

ಫೋಟೋ - http://v.duta.us/eqa8rQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/qZxU_wAA

📲 Get Dakshina Kannada News on Whatsapp 💬