650 ಕೆ.ಜಿ.ಗೂ ಹೆಚ್ಚು ಪ್ಲಾಸ್ಟಿಕ್‌ ವಶ

  |   Chamarajanagarnews

ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಮುಖ್ಯ ರಸ್ತೆಗಳಲ್ಲಿರುವ ಅಂಗಡಿಗಳ ಮೇಲೆ ಪೌರಾಯುಕ್ತ ನಾಗಶೆಟ್ಟಿ ಮತ್ತು ಸಿಬ್ಬಂದಿವಗ ದಿಢೀರ್‌ ದಾಳಿ ನಡೆಸಿ ಅಂಗಡಿಗಳಲ್ಲಿ ಬಚ್ಚಿಟ್ಟಿದ್ದ 650 ಕೆ.ಜಿ.ಗೂ ಹೆಚ್ಚು ಪ್ಲಾಸ್ಟಿಕ್‌ಗಳನ್ನು ಮಂಗಳವಾರ ವಶಪಡಿಸಿಕೊಂಡರು.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಕೂಡಲೇ ಪಟ್ಟಣಾದ್ಯಂತ ಅಂಗಡಿ, ಹೋಟೆಲ್‌ ಮತ್ತು ಬಟ್ಟೆ ಅಂಗಡಿಗಳು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಭರಾಟೆಯಾಗಿಯೇ ನಡೆಯುತ್ತಿದ್ದು, ಕೂಡಲೇ ದಾಳಿ ನಡೆಸಿ ಸಂಪೂರ್ಣ ಪ್ಲಾಸ್ಟಿಕ್‌ ನಿಷೇಧ ಮಾಡಬೇಕೆಂದು ನೀಡಿದ ನಿರ್ದೆಶನದ ಮೆರೆಗೆ ಕಾರ್ಯಪ್ರವೃತ್ತರಾದ ಪೌರಾಯುಕ್ತರು ದಾಳಿ ನಡೆಸಿ ಅಂಗಡಿಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಎಲ್ಲಾ ಬಗೆಯ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದರು.

ಪಟ್ಟಣದ ಪಾಂಡುರಂಗ ಟ್ರೇಡರ್ ಅಂಗಡಿ ಮೇಲೆ ದಾಳಿ ನಡೆಸಿ ಗೋದಾಮುಗಳಲ್ಲಿ ಇಡಲಾಗಿದ್ದ ವಿವಿಧ ಬಗೆಯ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಳ್ಳುತ್ತಿದ್ದಂತೆ ವರ್ತಕರ ಸಂಘದ ಅಧ್ಯಕ್ಷ ಮಹದೇವಯ್ಯ, ಉಪಾಧ್ಯಕ್ಷ ಸತೀಶ್‌, ನಾರಾಯಣಮೂರ್ತಿ ಸೇರಿದಂತೆ ಹಲವಾರು ಮುಖಂಡರು ಪೌರಾಯುಕ್ತರ ದಾಳಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ನಮಗೆ ಕಾಲಾವಕಾಶ ನೀಡಬೇಕು ಮತ್ತು ತುರ್ತು ಸಭೆ ಕರೆದು ವರ್ತಕರಿಗೆ ನಿರ್ದೇಶನ ನೀಡಬೇಕು. ಯಾವುದೇ ತರಹದ ಮಾಹಿತಿ ನೀಡದೆ ಏಕಾಏಕಿ ದಾಳಿ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು....

ಫೋಟೋ - http://v.duta.us/PFkDyAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/xL6ldAAA

📲 Get Chamarajanagar News on Whatsapp 💬