ಅನರ್ಹ ಬಿಪಿಎಲ್‌ ಕಾರ್ಡ್‌: ಕ್ರಿಮಿನಲ್‌ ಕೇಸು

  |   Dakshina-Kannadanews

ಮಂಗಳೂರು: ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಸುಳ್ಳು ಮಾಹಿತಿ ನೀಡಿ ಪಡೆದು ಸರಕಾರಕ್ಕೆ ವಂಚನೆ ಮಾಡಿರುವವರ ವಿರುದ್ಧ ಐಪಿಸಿ 420 ಅಡಿ ಕ್ರಿಮಿನಲ್‌ ಕೇಸು ದಾಖಲಿಸಲು ರಾಜ್ಯ ಸರಕಾರದ ಕಂದಾಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೆರೆ ಸಂತ್ರಸ್ತರ ಪುನರ್ವಸತಿ

ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದ ಉಸ್ತುವಾರಿ ಕಾರ್ಯದರ್ಶಿಗಳು, ಬೆಳ್ತಂಗಡಿ ತಾಲೂಕಿನ ಕೆಲವೆಡೆ ಸಂತ್ರಸ್ತರ ಮನೆ ಪುನರ್‌ ನಿರ್ಮಾಣಕ್ಕೆ ಅರಣ್ಯ ಇಲಾಖೆ ತಕರಾರು ಎತ್ತಿರುವುದಕ್ಕೆ ಅಸಮಾಧಾನ ಸೂಚಿಸಿ ದರು. ಸಂತ್ರಸ್ತರ ಬದುಕು ಕಟ್ಟುವಲ್ಲಿ ಸರಕಾರ ನಿರಂತರವಾಗಿ ತೊಡಗಿಸಿದ್ದು, ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. ನೆರೆ ಹಾವಳಿಯಲ್ಲಿ ಫಲಾನುಭವಿಗಳಿಗೆ ಆದಷ್ಟು ಬೇಗ ಪರಿಹಾರ ದೊರಕುವಂತೆ ಕಾರ್ಯ ನಿರ್ವಹಿಸಬೇಕು ಎಂದರು. ಪಿಂಚಣಿದಾರರಿಗೆ ತಾಂತ್ರಿಕ ಸಮಸ್ಯೆಗಳಿಂದ ಪಿಂಚಣಿ ಸರಿಯಾಗಿ ದೊರಕದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಇವುಗಳನ್ನು ತ್ವರಿತವಾಗಿ ಪರಿಹರಿಸಿ ಕ್ಲಪ್ತವಾಗಿ ಪಿಂಚಣಿ ದೊರಕಿಸಿಕೊಡುವಂತೆ ತಿಳಿಸಿದರು....

ಫೋಟೋ - http://v.duta.us/6fytDwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Sz7EpAAA

📲 Get Dakshina Kannada News on Whatsapp 💬