ಎಸ್‌ಸಿಪಿ, ಟಿಎಸ್‌ಪಿ ಯೋಜನೆ ದುರ್ಬಳಕೆ ಸಲ್ಲದು

  |   Hassannews

ಹಾಸನ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಮೀಸಲಾಗಿರುವ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಗೆ ಆ ಜನಾಂಗದವರ ಹೊರತು ಬೇರೆ ಜನಾಂಗದವರು ಫ‌ಲಾನುಭಗಳಾಗುವಂತಿಲ್ಲ, ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕೆಂದು ಶಾಸಕ ಶಿವಲಿಂಗೇಗೌಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫ‌ಲಾನುಭವಿಗಳನ್ನು ಜನಸಂಖ್ಯಾ ಆಧಾರದಲ್ಲಿ ಅವಕಾಶ ನೀಡಿ ಆಯ್ಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಒತ್ತಡ ಹಾಕದಿರಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರೈತರಿಗೆ ನೀಡುತ್ತಿರುವ ಬಿತ್ತನೆ ಬೀಜಗಳು ಮತ್ತು ಹನಿ ನೀರಾವರಿಗಾಗಿ ನೀಡುವ ಪೈಪುಗಳು ಗುಣಮಟ್ಟದ್ದಾಗಿಲ್ಲ ಹಾಗಾಗಿ ನಿರ್ದಿಷ್ಟ ಕಂಪನಿಗಳಿಂದಲೇ ಪಡೆಯುವಂತೆ ಅಧಿಕಾರಿಗಳು ರೈತರಿಗೆ ಒತ್ತಡ ಹಾಕದೆ ಗುಣಮಟ್ಟ ಪರೀಕ್ಷಿಸಿ ಪಡೆದುಕೊಳ್ಳುವ ಅವಕಾಶವನ್ನು ರೈತರಿಗೆ ನೀಡಬೇಕು. ಜಿಲ್ಲಾಸ್ಪತ್ರೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗಿರುವ ಉಚಿತ ಚಿಕಿತ್ಸೆಗಳ ಬಗ್ಗೆ ಮಾಹಿತಿಯಿಲ್ಲ ಹಾಗಾಗಿ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಚಿಕಿತ್ಸೆ ಪಡೆಯಲು ಜಾತಿ ಪ್ರಮಾಣ ಪತ್ರ ಕಡ್ಡಾಯ ಮಾಡುವಂತೆ ಹಿಮ್ಸ್‌ನ ಅಧಿಕಾರಿಗಳಿಗೆ ಶಾಸಕ ಶಿವಲಿಂಗೇಗೌಡ ನಿರ್ದೇಶನ ನೀಡಿದರು....

ಫೋಟೋ - http://v.duta.us/doqQ8gAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/LQ2VRQAA

📲 Get Hassan News on Whatsapp 💬