ಕುಷ್ಠ ರೋಗ ಪತ್ತೆಗೆ 847 ತಂಡ ರಚನೆ

  |   Yadgirinews

ಯಾದಗಿರಿ: ಸ್ಪರ್ಶ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಂಗವಾಗಿ ಜಿಲ್ಲಾದ್ಯಂತ ನ. 11ರಿಂದ 28ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಯಶಸ್ವಿಗೊಳಿಸುವ ಮೂಲಕ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಬೇಕು ಎಂದು ಜಿಲ್ಲಾ ಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು. ಶಾಲಾ-ಕಾಲೇಜುಗಳಲ್ಲಿ ಸ್ಪರ್ಶ ಕುಷ್ಠರೋಗ ಕುರಿತು ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಂದೋಲನ ಅವ ಧಿಯಲ್ಲಿ ಮನೆ ಮನೆಗೆ ಭೇಟಿ ನೀಡಿ, ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ರೋಗಿಗಳನ್ನು ಪತ್ತೆಹಚ್ಚಿ ಅವರಿಗೆ ಚಿಕಿತ್ಸೆ ಕೊಡಿಸಬೇಕು ಎಂದು ನಿರ್ದೇಶಿಸಿದರು.

ನವೆಂಬರ್‌ 10ರಂದು ಪೂರ್ವಭಾವಿಯಾಗಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಬಗ್ಗೆ ಪ್ರತಿಯೊಂದು ತಂಡದವರು ತಮ್ಮ ತಮ್ಮ ಗ್ರಾಮದಲ್ಲಿ ಸಮುದಾಯದ ಸಭೆ ನಡೆಸಬೇಕು. ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ತರಬೇತಿಯನ್ನು ನಡೆಸಲು ಜಿಲ್ಲಾಧಿಕಾರಿ ಸೂಚಿಸಿದರು....

ಫೋಟೋ - http://v.duta.us/jvDbuwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/jHKF8AAA

📲 Get Yadgiri News on Whatsapp 💬