ಜನವರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಡಿಸಿಎಂ ಕಾರಜೋಳ

  |   Kalburaginews

ಕಲಬುರಗಿ: ಕಲಬುರಗಿಯಲ್ಲಿ ನಡೆಯಬೇಕಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಯಲ್ಲಿ ಆಯೋಜಿಸುವ ಬಗ್ಗೆ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್‌ನಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ‌ಇದೆ. ಚುನಾವಣೆಗಳು ಬಂದರೆ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಹೀಗಾಗಿ ಸಮ್ಮೇಳನ ವ್ಯವಸ್ಥಿತವಾಗಿ ನಡೆಸಲು ಅಡ್ಡಿಯಾಗುವ ಸಾಧ್ಯತೆ ಇದೆ.‌ ಜನವರಿಯಲ್ಲಿ ಅದ್ದೂರಿಯಾಗಿ ನಡೆಸಬಹುದು ಎಂದರು.

ಸಮ್ಮೇಳನದ ಕುರಿತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅವರು ನನ್ನನ್ನು ಭೇಟಿ ಮಾಡಿದ್ದಾರೆ. ಅವರಿಗೂ ವಿಷಯ ತಿಳಿಸಿದ್ದೇನೆ ಎಂದು ಸಚಿವರು ಹೇಳಿದರು.

ಉಸ್ತುವಾರಿ ಸಚಿವರಾಗಿ ತಿಂಗಳ ಬಳಿಕ ಜಿಲ್ಲೆ ಬಂದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರ ರಚನೆಯಾದ ತಕ್ಷಣ ರಾಜ್ಯದಲ್ಲಿ ಶತಮಾನದ ಕಂಡು ಅರಿಯದ ಪ್ರವಾಹ ಬಂತು.‌ ನಂತರ ಅಧಿವೇಶನ ಆರಂಭವಾಯಿತು‌. ಆದ್ದರಿಂದ ಕಲಬುರಗಿಗೆ ಭೇಟಿ ನೀಡುವುದು ತಡವಾಗಿದೆ. ಆದರೆ, ಯಾವುದೇ ಸಭೆಯನ್ನು ಕಾಟಾಚಾರಕ್ಕೆ ಮಾಡಲ್ಲ ಎಂದು ಸಮಜಾಯಿಷಿ ಕೊಟ್ಟರು.

ಕೇಂದ್ರದಿಂದ 1,200 ಕೋಟಿ‌‌ ರೂ. ನೆರೆಗಾಗಿ ಮಧ್ಯಂತರ ಪರಿಹಾರ ನೀಡಲಾಗಿದೆ. ಕರ್ನಾಟಕ ಮತ್ತು ಬಿಹಾರಕ್ಕೆ ಮಾತ್ರ ಮಧ್ಯಂತರ ಪರಿಹಾರ ಬಿಡುಗಡೆಯಾಗಿದೆ. ಸಿಎಂ ನೇತೃತ್ವದಲ್ಲಿ ಪ್ರಧಾನಿಗಳನ್ನು ಭೇಟಿಯಾಗಿ ಹೆಚ್ಚಿನ ಹಣ ಬಿಡುಗಡೆಗೆ ಮನವಿ ಮಾಡಲಾಗಿದೆ. ಹೆಚ್ಚಿನ ಅನುದಾನ ಕೇಂದ್ರದಿಂದ ಬರುತ್ತದೆ ಎಂದರು....

ಫೋಟೋ - http://v.duta.us/oT1AewEA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/BB4heQAA

📲 Get Kalburagi News on Whatsapp 💬