ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರನ ಸೆರೆ?

  |   Karnatakanews

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರನೊಬ್ಬನ ಬಂಧನವಾಗಿದೆ ಎಂಬ ವದಂತಿ ಹಬ್ಬಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಆದರೆ, ಜಿಲ್ಲಾ ಪೊಲೀಸ್‌ ಇಲಾಖೆ ಮಾತ್ರ ಈ ವಿಚಾರವನ್ನು ತಳ್ಳಿ ಹಾಕಿದ್ದು, ಸ್ಯಾಟಲೈಟ್‌ ಫೋನ್‌ ಬಳಕೆ ಆಗಿರುವ ಬಗ್ಗೆ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದೆ.

ತೀರ್ಥಹಳ್ಳಿಯ ಸುರಾನಿ ಎಂಬ ಗ್ರಾಮದಲ್ಲಿ ಶಿವಮೊಗ್ಗ ಪೊಲೀಸರು ಮಂಗಳವಾರ ಭಾರೀ ಹುಡುಕಾಟ ನಡೆಸಿದ್ದು, ಇಲ್ಲಿನ ತೋಟದ ಮನೆಯೊಂದರಲ್ಲಿ ಕೆಲ ಹೊತ್ತು ತಪಾಸಣೆ ನಡೆಸಿದರು. ಈ ಭಾಗದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಇಲ್ಲಿ ಓಡಾಡುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.

ಈ ಕಾರಣಕ್ಕೆ ಶಂಕಿತ ಭಯೋತ್ಪಾದಕರ ಬಂಧನವಾಗಿದೆ ಎಂಬ ವದಂತಿ ಹಬ್ಬಿದೆ. ಭಾರತದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆಗೆ ನಿಷೇಧವಿದೆ. ಆದರೂ ತೀರ್ಥಹಳ್ಳಿಯ ಸುರಾನಿ ಭಾಗದಲ್ಲಿ ಕೆಲ ದಿನದ ಹಿಂದೆ ಸ್ಯಾಟಲೈಟ್‌ ಫೋನ್‌ ಸಿಗ್ನಲ್‌ ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಪೊಲೀಸ್‌ ಇಲಾಖೆಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭ್ಯವಾಗಿತ್ತು.

ಹಾಗಾಗಿ, ದಿಢೀರ್‌ ತಪಾಸಣೆ ನಡೆಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಈ ಹಿಂದೆ ಶಂಕಿತ ಭಯೋತ್ಪಾದಕರ ಬಂಧನವಾಗಿತ್ತು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಸುರಾನಿ ಗ್ರಾಮದಲ್ಲಿ ನಡೆದ ಪೊಲೀಸ್‌ ತಪಾಸಣೆ ಬಗ್ಗೆ ವದಂತಿ ಹಬ್ಬಲು ಕಾರಣವಾಗಿದೆ....

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/pTkZjwAA

📲 Get Karnatakanews on Whatsapp 💬