ನೆರೆಯೊಂದಿಗೆ ಮಳೆಹಾನಿ ಪ್ರಸ್ತಾವನೆ ಸಲ್ಲಿಸಿ

  |   Dharwadnews

ಧಾರವಾಡ: ನೆರೆ ಹಾವಳಿಯ ಹಾನಿ ವರದಿ ಜೊತೆಗೆ ಜಿಲ್ಲೆಯಲ್ಲಿ ಮತ್ತೆ ಕಳೆದ ಒಂದು ವಾರದಲ್ಲಿ ಸುರಿದ ಮಳೆಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ, ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಪಂ ಅಧ್ಯಕ್ಷೆ, ಉಪಾಧ್ಯಕ್ಷ ಮತ್ತು ಸಿಇಒ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಈ ಹಿಂದೆ ಆಗಿರುವ ಮಳೆಹಾನಿಯ ಜೊತೆಗೆ ಈಗ ಕಳೆದ ಐದು ದಿನಗಳಿಂದ ಆಗುತ್ತಿರುವ ಮಳೆಯಿಂದ ರಸ್ತೆ, ಸೇತುವೆ, ಬೆಳೆ ಸೇರಿದಂತೆ ಆಗಿರುವ ಹಾನಿಯ ಬಗ್ಗೆಯೂ ಪರಿಶೀಲನೆ ಕೈಗೊಂಡು ವರದಿ ಸಿದ್ಧಪಡಿಸುವಂತೆ ಇಲಾಖಾವಾರು ಅಧಿಕಾರಿಗಳಿಗೆ ಜಿಪಂ ಸಿಇಒ ಡಾ| ಸತೀಶ ಅವರ ಮೂಲಕ ಸೂಚನೆ ಕೊಡಲಾಯಿತು.

ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟು ಹೋಗಿದ್ದು, ಕೆಲವೊಂದಿಷ್ಟು ಕಡೆ ಸೇತುವೆಗಳು ಕುಸಿದು ಸಂಚಾರಗಳೇ ಬಂದ್‌ ಆಗಿವೆ. ನವಲಗುಂದ ತಾಲೂಕಿನಲ್ಲಿ ಸಾರಿಗೆ ಸಂಚಾರಕ್ಕೆ ತುಂಬಾ ಅಡಚಣೆಗಳು ಆಗಿದ್ದು, ಯಮನೂರ ಸೇರಿದಂತೆ ಕೆಲ ಗ್ರಾಮಗಳಿಗೆ ಸಾರಿಗೆ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ಮೂಲ ಸೌಕರ್ಯಗಳ ಮರು ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು....

ಫೋಟೋ - http://v.duta.us/RhBUywAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/SRJ1JQAA

📲 Get Dharwad News on Whatsapp 💬