ಬಿಜೆಪಿ ಸರ್ಕಾರದ ಗೊಂದಲಕ್ಕೆ "ಜಾತಿ' ಬಣ್ಣ

  |   Bangalore-Citynews

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರದ ಕಾರ್ಯ ಚಟುವಟಿಕೆ ಹಾಗೂ ಪಕ್ಷದ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ಇದೀಗ "ಜಾತಿ' ಬಣ್ಣ ಲೇಪಿತವಾಗುತ್ತಿದೆ. ರಾಜ್ಯದಲ್ಲಿನ ಕೆಲ ಬೆಳವಣಿಗೆ ಆಧರಿಸಿ ಆಡಳಿತಾರೂಢ ಬಿಜೆಪಿ ಒಕ್ಕಲಿಗ ವಿರೋಧಿ ಎಂಬಂತೆ ಕೆಲ ಸಂಘಟನೆಗಳೊಂದಿಗೆ ಕಾಂಗ್ರೆಸ್‌, ಜೆಡಿಎಸ್‌ ಕೂಡ ಆರೋಪಿಸುತ್ತಿವೆ. ಇನ್ನೊಂದೆಡೆ, ಪಕ್ಷದಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಸ್ವಪಕ್ಷೀಯ ಶಾಸಕರೇ ದೂರಿದ್ದಾರೆ.

ಅದರ ಬೆನ್ನಲ್ಲೇ ಬಿಜೆಪಿ ರಾಜ್ಯ ಕಾರ್ಯಾಲಯದ ಕೆಲ ಸಿಬ್ಬಂದಿ ಬದಲಾವಣೆಗೆ "ಜಾತಿ' ಕಾರಣ ನೀಡಲಾಗುತ್ತಿದೆ. ಯಡಿಯೂರಪ್ಪ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದು, ಸದ್ಯ ಎರಡೂವರೆ ತಿಂಗಳ ಅಧಿಕಾರ ಪೂರ್ಣಗೊಳಿಸಿದ್ದಾರೆ. ಈ ಅವಧಿಯಲ್ಲಿ ಅವರ ನಡೆ, ನುಡಿ, ಕಾರ್ಯ ನಿರ್ವಹಣೆಯಲ್ಲಿ ಸಾಕಷ್ಟು ಬದಲಾವಣೆಯಾಗಿರುವುದನ್ನು ಆಪ್ತರೂ ಒಪ್ಪುತ್ತಾರೆ. ಇನ್ನೊಂದೆಡೆ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ನೇಮಕಗೊಂಡ ಬಳಿಕ ಪಕ್ಷ ಹಾಗೂ ಸರ್ಕಾರದ ಕಾರ್ಯ ಚಟುವಟಿಕೆಗಳಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ.

ಇದೀಗ ಅದು "ಜಾತಿ' ಬಣ್ಣದ ರೂಪ ಪಡೆಯುತ್ತಿರುವುದು ಹೊಸ ಬೆಳವಣಿಗೆ. ಒಂದೆಡೆ, ಡಿ.ಕೆ.ಶಿವಕುಮಾರ್‌ ಬಂಧನ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕೇಳಿ ಬಂದ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವುದು. ಬಿಬಿಎಂಪಿ ಮೇಯರ್‌ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡದಿರುವುದು ಸೇರಿದಂತೆ ಇತರ ಕೆಲ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ, ಒಕ್ಕಲಿಗ ವಿರೋಧಿ ಎಂದು ಆರೋಪಿಸಲಾಗುತ್ತಿದೆ....

ಫೋಟೋ - http://v.duta.us/i_Hg6wAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/m3FLOwAA

📲 Get Bangalore City News on Whatsapp 💬