ಬಿಜೆಪಿ ಸರ್ಕಾರ ಮೂರವರೆ ವರ್ಷ ಅಧಿಕಾರ ಪೂರೈಸುತ್ತದೆ: ಅನರ್ಹ ಶಾಸಕ ಸುಧಾಕರ್

  |   Karnatakanews

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮೂರುವರೆ ವರ್ಷ ಬಿಜೆಪಿ ಸರ್ಕಾರ ಅಧಿಕಾರ ನಡೆಸಲಿದೆ. ಉಪ ಚುನಾವಣೆ ಬಳಿಕ ಬಿಜೆಪಿ ಸರ್ಕಾರ ಪತನವಾಗುತ್ತೆ ಎನ್ನುವುದು ಕೆಲವರ ಬರೀ ಭ್ರಮೆ ಎಂದು ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಬಳಿಕ ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರ ಪತನ ಅಗುವುದಿಲ್ಲ, ತನ್ನ ಅಧಿಕಾರ ಅವಧಿ ಪೂರ್ಣಗೊಳಿಸಲಿದೆ ಎಂದರು.

ಇದೇ ಸಂದರ್ಭದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ವಾಗ್ದಾಳಿ ನಡೆಸಿದ ಸುಧಾಕರ್, ಸುಪ್ರೀಂಕೋರ್ಟ್ ತೀರ್ಪು ಬಳಿಕ ಎಲ್ಲವನ್ನೂ ಮಾತನಾಡುತ್ತೇನೆ. ಸುಪ್ರೀಂಕೋರ್ಟ್ ನಲ್ಲಿ ನಮ್ಮ ಪರವಾಗಿ ನ್ಯಾಯ ಸಿಗುವ ವಿಶ್ವಾಸ ನಮಗೆ ನೂರಕ್ಕೆ ನೂರು ಇದೆ ಎಂದರು. ಸುಪ್ರೀಂಕೋರ್ಟ್ ತೀರ್ಪು ಬಳಿಕವಷ್ಟೆ ತಮ್ಮ ರಾಜಕೀಯ ನಿರ್ಧಾರವನ್ನು ತೆಗೆದುಕೊಳ್ಳುತ್ತೆನೆ ಎನ್ನುವ ಮೂಲಕ ಬಿಜೆಪಿ ಜೊತೆ ಸೇರಿ ಚುನಾವಣೆಗೆ ಸ್ಪರ್ಧಿಸಬೇಕಾ ಅಥವ ಸ್ವತಂತ್ರವಾಗಿ ಸ್ಪರ್ಧಿಸಬೇಕಾ ಎಂಬುದರ ಬಗ್ಗೆ ನಿರ್ಧಾರಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ಅತಿವೃಷ್ಟಿ ಇರುವುದರಿಂದ ಹೊಸದಾಗಿ ರೈತರ ಸಾಲ ಮನ್ನಾ ಮಾಡುವುದಿಲ್ಲ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆಯನ್ನು ಸುಧಾಕರ್ ಸಮರ್ಥಿಸಿಕೊಂಡರು.

ಫೋಟೋ - http://v.duta.us/-1UYzAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/7eMZNQAA

📲 Get Karnatakanews on Whatsapp 💬