ಮಹಿಳಾ ಸಬಲೀಕರಣಕ್ಕೆ ಆದ್ಯತೆ ಕೊಡಿ

  |   Davanagerenews

ದಾವಣಗೆರೆ: ವಿಶ್ವ ಹೆಣ್ಣು ಮಕ್ಕಳ ದಿನದ ಅಂಗವಾಗಿ ಸುಸ್ಥಿರ ಅಭಿವೃದ್ಧಿ ಗುರಿಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಬುಧವಾರ ಸಂಜೆ ಮೌನ ಕ್ಯಾಂಡಲ್‌ ವಾಕ್‌... ಡಾನ್‌ಬಾಸ್ಕೋ ಸಂಸ್ಥೆಯಿಂದ ಶಿಬಾರದ ವೃತ್ತದವರೆಗೆ ನಡೆಯಿತು.

ಡಾನ್‌ಬಾಸ್ಕೋ ಬಾಲಕಾರ್ಮಿಕರ ಮಿಷನ್‌, ಜಿಲ್ಲಾ ಮಕ್ಕಳ ಹಕ್ಕುಗಳ ಕ್ಲಬ್‌ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ, ನ್ಯಾಯವಾದಿ ಎಲ್‌.ಎಚ್‌. ಅರುಣ್‌ಕುಮಾರ್‌, ಇಂದಿನ ಆಧುನಿಕ ಯುಗದಲ್ಲೂ ಹೆಣ್ಣು ಮಕ್ಕಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗುತ್ತಿದೆ. ಇದು ಮುಂದೊಂದು ದಿನ ದೊಡ್ಡ ಮಟ್ಟದ ಲಿಂಗಾನುಪಾತದಂತ ಗಂಭೀರ ಸಮಸ್ಯೆ ಉಂಟು ಮಾಡಬಹುದು ಎಂದು ಕಳವಳ ವ್ಯಕ್ತಪಡಿಸಿದರು.

ಹೆಣ್ಣು ಮಕ್ಕಳು, ಭ್ರೂಣಹತ್ಯೆ, ಲಿಂಗಭೇದ, ಲೈಂಗಿಕ ಕಿರುಕುಳ , ಬಾಲ್ಯವಿವಾಹ, ಗೃಹ ಹಿಂಸೆಯಂತಹ ಸಮಸ್ಯೆ ಇವೆ. ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಸಮಸ್ಯೆಗಳ ನಿವಾರಣೆ ಮಾಡಲು ಜಾಗೃತಿ ಮೂಡಿಸುವುದು ಅತಿ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ವಿಶ್ವಸಂಸ್ಥೆ 2012ರ ಅ. 11ರಂದು ವಿಶ್ವ ಹೆಣ್ಣು ಮಕ್ಕಳ ದಿನ ಆಚರಣೆಗೆ ತಂದಿದೆ. ಸಮಸ್ಯೆಗಳನ್ನು ಎತ್ತಿಹಿಡಿಯುವುದು ಹಾಗೂ ಹೆಣ್ಣು ಮಕ್ಕಳ ಹಕ್ಕು ಮತ್ತು ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವುದು ಮುಖ್ಯ ಎಂದು ತಿಳಿಸಿದರು....

ಫೋಟೋ - http://v.duta.us/B9WUYAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/yiqW1AAA

📲 Get Davanagere News on Whatsapp 💬