ಸಂತ್ರಸ್ತರ ಭೂ ಮಂಜೂರಾತಿಯಲ್ಲಿ ಅಕ್ರಮ

  |   Hassannews

ಹಾಸನ: ಹೇಮಾವತಿ ಜಲಾಶಯ ಯೋಜನೆಯ (ಎಚ್‌ಆರ್‌ಪಿ) ಮುಳುಗಡೆ ಸಂತ್ರಸ್ತರಿಗೆ ಮೀಸಲಿರಿಸಿದ್ದ ಭೂ ಮಂಜೂರಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ತಪ್ಪಿಸ್ಥತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೇಮಾವತಿ ಮತ್ತು ಯಗಚಿ ಜಲಾಶಯ ಯೋಜನೆಯ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗಾಗಿ ಕಾಯ್ದಿರಿಸಿದ್ದ ಭೂಮಿಯ ಮಂಜೂರಾತಿಗೆ 2017ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಸಂತ್ರಸ್ತರಿಂದ ಹಾಸನದ ವಿಶೇಷ ಭೂ ಸ್ವಾಧೀನಾಧಿಕಾರಿಯವರ ಕಚೇರಿಗೆ 2,860 ಅರ್ಜಿಗಳು ಸಲ್ಲಿಕೆಯಾಗಿದ್ದವು. ಭೂಮಿಯನ್ನೂ ಮಂಜೂರು ಮಾಡಲಾಗಿತ್ತು.

ನಕಲಿ ಸಹಿ ಮಾಡಿ ಭೂಮಿ ಮಂಜೂರು: ಬಹುತೇಕ ಅರ್ಜಿಗಳಲ್ಲಿ ಸತ್ಯಾಂಶವಿಲ್ಲ, ನಿಯಮ ಮೀರಿ ಏಕ ಪಕ್ಷೀಯವಾಗಿ ಅನರ್ಹರಿಗೂ ಭೂಮಿ ಮಂಜೂರಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಹಾಸನ ಉಪ ವಿಭಾಗಾಧಿಕಾರಿ ಎಚ್‌.ಎಲ್‌.ನಾಗರಾಜ್‌ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ತನಿಖಾ ಸಮಿತಿ ರಚನೆ ಮಾಡಿತ್ತು. ಸಮಿತಿಯು ಪರಿಶೀಲನೆ ನಡೆಸಿ ಭೂಮಿ ಮಂಜೂರಾದ 979 ಪ್ರಕರಣಗಳ ಪೈಕಿ 414 ಪ್ರಕರಣಗಳಲ್ಲಿ ಅಧಿಕಾರಿಗಳ ಸಹಿ ನಕಲು ಮಾಡಿ 1,654 ಎಕರೆ ಭೂಮಿ ಮಂಜೂರಾಗಿದೆ ಎಂದು ತಿಳಿಸಿದ್ದರು....

ಫೋಟೋ - http://v.duta.us/iSFAqAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/kHwQsQAA

📲 Get Hassan News on Whatsapp 💬