ಸಮೂಹ ಸಾರಿಗೆ ಉತ್ತೇಜನಕ್ಕೆ ಬಸ್‌ ಪಥ

  |   Bangalore-Citynews

ಬೆಂಗಳೂರು: "ನಗರದ ಸೆಂಟ್ರಲ್‌ ಸಿಲ್ಕ್ ಬೋರ್ಡ್‌ ಜಂಕ್ಷನ್‌ನಿಂದ ಕೆ.ಆರ್‌.ಪುರದ ನಡುವೆ ನಿರ್ಮಿಸಲಾಗುತ್ತಿರುವ ಪ್ರತ್ಯೇಕ ಬಸ್‌ ಪಥವನ್ನು ಯಶಸ್ಸು ಮತ್ತು ವೈಫ‌ಲ್ಯಗಳ ದೃಷ್ಟಿಯಿಂದ ನೋಡುವುದಕ್ಕಿಂತ ಸಾರ್ವಜನಿಕ ಸಾರಿಗೆ ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಉತ್ತಮ ಪ್ರಯೋಗವೆಂದು ಪರಿಗಣಿಸುವ ಅವಶ್ಯಕತೆ ಇದೆ' ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸ್ಪಷ್ಟಪಡಿಸಿದರು.

ನಗರದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕೇಂದ್ರ ಕಚೇರಿಯಲ್ಲಿ ಬುಧವಾರ ಬಿ-ಪ್ಯಾಕ್‌ ಸಂಸ್ಥೆಯು ಉಬರ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ "ಬೆಂಗಳೂರಿಗಾಗಿ ಸುಸ್ಥಿರ ಸಾರಿಗೆ' ಕುರಿತ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಾಹನದಟ್ಟಣೆ ವಿಪರೀತ ಇರುವ ಬೆಂಗಳೂರಿನಂತಹ ನಗರದಲ್ಲಿ ಬಸ್‌ಗಾಗಿ ಪ್ರತ್ಯೇಕ ಪಥ ಯಶಸ್ಸು ಆಗುತ್ತದೆಯೇ? ವಿಫ‌ಲವಾದರೆ ಮುಂದೇನು? ಎಂಬ ಅನುಮಾನಗಳನ್ನು ವ್ಯಕ್ತಪಡಿಸಲಾಗುತ್ತಿದೆ. ಆದರೆ, ಇದು ಯಶಸ್ಸು ಅಥವಾ ವೈಫ‌ಲ್ಯದ ಪ್ರಶ್ನೆ ಅಲ್ಲ. ಸಮೂಹ ಸಾರಿಗೆ ವ್ಯವಸ್ಥೆಗೆ ಆದ್ಯತೆ ನೀಡುವ ಹಾಗೂ ಆ ಮೂಲಕ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಒಂದು ಪ್ರಯತ್ನ. ಅದು 1 ಕಿ.ಮೀ. ಅಥವಾ ಎರಡು ಕಿ.ಮೀ. ಆಗಿರಬಹುದು. ಅಷ್ಟಕ್ಕೂ ಇದು ಅಂತ್ಯವಲ್ಲ; ಆರಂಭಿಕ ಹೆಜ್ಜೆ ಎಂದು ಪ್ರತಿಪಾದಿಸಿದರು....

ಫೋಟೋ - http://v.duta.us/FQCkJwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/cCqGKAAA

📲 Get Bangalore City News on Whatsapp 💬