ಸ್ವಚ್ಛತೆಯ ಜನಜಾಗೃತಿ ಮೂಡಿಸುವುದು ಅಗತ್ಯ

  |   Mandyanews

ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ,ಮಲೇರಿಯಂತಹ ರೋಗಗಳ ನಿಯಂತ್ರಣದ ಬಗ್ಗೆ ಗ್ರಾಮೀಣ ಭಾಗದ ಜನರ ಮನೆ ಮನೆಗೆ ಭೇಟಿ ನೀಡಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ತಿಳಿಸಿದರು.

ಜಿಲ್ಲಾ ಪಂಚಾಯತ್‌ ಕಾವೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಡೆಂಘೀ

ಪ್ರಕರಣಗಳು ಕಂಡು ಬರುವುದರಿಂದ ಮುನ್ನೆಚ್ಚರಿಕೆ

ಕ್ರಮವಾಗಿ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಶಾಲಾ ಮಕ್ಕಳಿಗೆ ವರ್ಷದ ಒಂದು ದಿನ ಆರೋಗ್ಯ ತಪಾಸಣೆ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಹೆಚ್ಚು ಮಳೆ: ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಏಪ್ರಿಲ... ತಿಂಗಳಿಂದ ಈವರೆಗೆ ಹೆಚ್ಚು ಮಳೆಯಾಗಿದ್ದು ಕೆರೆ ಕಟ್ಟೆಗಳು ತುಂಬಿರುವುದರಿಂದ ಹಿಂಗಾ ರು ಬೆಳೆ ಬೆಳೆಯಲು ಅನುಕೂಲವಾದ ವಾತಾವರಣವಿರುತ್ತದೆ. ಜಿಲ್ಲೆಯಲ್ಲಿ ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ಗೊಬ್ಬರಗಳ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ತಿಳಿಸಿದರು....

ಫೋಟೋ - http://v.duta.us/T8TTxQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/a21tFgAA

📲 Get Mandya News on Whatsapp 💬