ಟಿಬಿ ಡ್ಯಾಂನಿಂದ ಹೆಚ್ಚುವರಿ ನೀರು ಬಿಡುಗಡೆ

  |   Karnatakanews

ಹೊಸಪೇಟೆ: ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದಿಂದ 10 ಕ್ರಸ್ಟ್ ಗೇಟ್‌ಗಳ ಮೂಲಕ 35 ಸಾವಿರ ಕ್ಯೂಸೆಕ್ ನೀರನ್ನು ಮಂಗಳವಾರ ನದಿಗೆ ಹರಿ ಬಿಡಲಾಗಿದೆ.

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಕಳೆದ ನಾಲ್ಕಾರು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಜಲಾಶಯಕ್ಕೆ ಹರಿದುಬರುತ್ತಿರುವ ಒಳ ಹರಿವಿನ ಪ್ರಮಾಣ ದ್ವಿಗುಣವಾಗಿದೆ. ಜಲಾಶಯದ ಸಮತೋಲನ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತುಂಗಭದ್ರಾಾ ಮಂಡಳಿ ನದಿಗೆ ನೀರು ಹರಿಸುತ್ತಿದೆ. ಹೀಗಾಗಿ ನದಿ ಪಾತ್ರದ ಜನ-ಜಾನುವಾರುಗಳು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಈ ಬಾರಿ ಜುಲೈ ಕಳೆದರೂ ಜಲಾಶಯ ಭರ್ತಿಯಾಗದೇ ಇರುವುದರಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ಮನೆ ಮಾಡಿತ್ತು. ಆಗಸ್ಟ್ ಎರಡನೇ ವಾರದ ಆರಂಭದಲ್ಲಿ ಸುರಿದ ಬಾರಿ ಮಳೆಯಿಂದಾಗಿ ಜಲಾಶಯ ಭರ್ತಿಯಾಗಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಯಿತು. ಇದೀಗ ಜಲಾಶಯದಲ್ಲಿ ನೀರಿನ ಪ್ರಮಾಣ ಏರಿಕೆಯಾದ ಹಿನ್ನೆಲೆಯಲ್ಲಿ ಆಧಿಕ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಮಿಂಚು, ಸಿಡಿಲು ಸಹಿತ ಉತ್ತಮ ಮಳೆ: ಕರಾವಳಿಯ ಹಲವು ಕಡೆ ಮಂಗಳವಾರ ಮಿಂಚು, ಸಿಡಿಲು-ಗುಡುಗಿನಿಂದ ಕೂಡಿದ ಉತ್ತಮ ಮಳೆಯಾದ ವರದಿಯಾಗಿದೆ. ಮಂಗಳೂರು ನಗರದಲ್ಲಿ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಪುತ್ತೂರು, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಬಂಟ್ವಾಳ, ವೇಣೂರು ಪರಿಸರದಲ್ಲಿ ಮಿಂಚು- ಸಿಡಿಲು ಸಹಿತ ಮಳೆಯಾಗಿದೆ.ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ಉತ್ತಮ ಮಳೆ ಸುರಿದಿದೆ....

ಫೋಟೋ - http://v.duta.us/UNhT3AAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/F5TFeQAA

📲 Get Karnatakanews on Whatsapp 💬