ನಗರಾದ್ಯಂತ ಉಚಿತ ಕ್ಯಾನ್ಸರ್‌ ಪತ್ತೆ ಶಿಬಿರ

  |   Bangalore-Citynews

ಬೆಂಗಳೂರು: ಬದಲಾದ ಜೀವನ ಶೈಲಿಯಿಂದ ರಾಜಧಾನಿ ಬೆಂಗಳೂರಿನಲ್ಲಿ ಕ್ಯಾನ್ಸರ್‌ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಕಿದ್ವಾಯಿ ಸ್ಮಾರಕ ಗ್ರಂಥಿ ಸಹಯೋಗದೊಂದಿಗೆ ಪ್ರತಿ ವಾರ್ಡ್‌ಗಳಲ್ಲೂ ಉಚಿತವಾಗಿ ಕ್ಯಾನ್ಸರ್‌ ಪತ್ತೆ ಶಿಬಿರ ಹಮ್ಮಿಕೊಳ್ಳಲು ಬಿಬಿಎಂಪಿ ಮುಂದಾಗಿದೆ.

ಕ್ಯಾನ್ಸರ್‌ ರೋಗವನ್ನು ಶೀಘ್ರ ಪತ್ತೆ ಮಾಡಿ ನಗರವಾಸಿಗಳನ್ನು ರಕ್ಷಿಸುವಲ್ಲಿ ವಾರಕ್ಕೊಂದು ವಾರ್ಡ್‌ ನಂತೆ ಎಲ್ಲಾ ವಾರ್ಡ್‌ಗಳಲ್ಲಿಯೂ ಉಚಿತವಾಗಿ ಕ್ಯಾನ್ಸರ್‌ ಪತ್ತೆಗೆ ತಪಾಸಣಾ ಶಿಬಿರಗಳನ್ನು ನಡೆಸುವ ಕುರಿತು ಕಿದ್ವಾಯಿ ಸ್ಮಾರಕ ಗ್ರಂಥಿ ಹಾಗೂ ಬಿಬಿಎಂಪಿ ಚರ್ಚಿಸಿದ್ದು, ಈ ತಿಂಗಳಲ್ಲಿಯೇ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಅದಾದ ನಂತರ ಪ್ರತಿ ವಾರ್ಡ್‌ನಲ್ಲೂ ಮುಂದಿನ ತಿಂಗಳಿಂದ ತಪಾಸಣಾ ಹಾಗೂ ಪತ್ತೆ ಶಿಬಿರಗಳು ಆರಂಭಗೊಳ್ಳಲಿವೆ. ಇದಕ್ಕಾಗಿ ಸಂಚಾರಿ ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗುವುದು. ದೇಶದ ಇತರೆ ಮಹಾನಗರಗಳು, ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ತಾಂತ್ರಿಕವಾಗಿ ಅಭಿವೃದ್ಧಿ ಹೊಂದಿರುವ ಹಾಗೂ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವಿರುವ ಬೆಂಗಳೂರಿನಲ್ಲಿಯೇ ಕ್ಯಾನ್ಸರ್‌ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಅಧ್ಯಯನಗಳಿಂದ ದೃಢಪಟ್ಟಿದೆ. ಆರಂಭಿಕ ಹಂತದಲ್ಲಿಯೇ ಈ ಕ್ಯಾನ್ಸರ್‌ ಪತ್ತೆಯಾದರೆ ಶೇ. 80ಕ್ಕಿಂತ ಹೆಚ್ಚು ರೋಗಿಗಳು ಗುಣಮುಖರಾಗಬಹುದು. ಹೀಗಾಗಿ, ಬಿಬಿಎಂಪಿ ಹಾಗೂ ಕಿದ್ವಾಯಿ ಸಂಸ್ಥೆ ಜತೆಗೂಡಿ ಒಪ್ಪಂದಕ್ಕೆ ತೀರ್ಮಾನಿಸಿದೆ....

ಫೋಟೋ - http://v.duta.us/eIZsWwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/pZA41AAA

📲 Get Bangalore City News on Whatsapp 💬