ಪಕ್ಷ ಸೇರಲ್ಲ, ಪಕ್ಷಾತೀತವಾಗಿ ಕೆಲಸ ಮಾಡುವೆ: ಸುಮಲತಾ

  |   Karnatakanews

ಮಂಡ್ಯ: "ನಾನು ಯಾವುದೇ ಪಕ್ಷ ಸೇರುವ ಬಗ್ಗೆ ಯೋಚಿಸಿಲ್ಲ' ಎಂದು ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನನ್ನನ್ನು ಬೆಂಬಲಿಸಲಿಲ್ಲ. ಆ ಪಕ್ಷದ ಕಾರ್ಯಕರ್ತರು ಮಾತ್ರ ನನಗೆ ಶಕ್ತಿಯಾಗಿ ನಿಂತರು. ಬಿಜೆಪಿ ನನಗೆ ಬಹಿರಂಗವಾಗಿಯೇ ಬೆಂಬಲ ಘೋಷಿಸಿತು.

ಹಾಗಾಗಿ, ನಾನು ಬಿಜೆಪಿ ಕಚೇರಿಗೆ ಬಂದು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ನಾನು ಕಾಂಗ್ರೆಸ್‌ ಪಕ್ಷದ ಕಚೇರಿಗೆ ಹೋಗಲಾಗುವುದಿಲ್ಲ. ಆದರೆ, ಪಕ್ಷದ ಕಾರ್ಯಕರ್ತರಿಗೆ ಈಗಾಗಲೇ ಹಲವಾರು ವೇದಿಕೆಗಳಲ್ಲಿ ಕೃತಜ್ಞತೆ ಸಲ್ಲಿಸಿದ್ದೇನೆ ಎಂದರು.

"ಈಗಲೂ ನಾನು ಪಕ್ಷೇತರ ಸಂಸದೆ. ಈವರೆಗೂ ಯಾವ ಪಕ್ಷದವರೂ ನನ್ನನ್ನು ಆಹ್ವಾನಿಸಿಲ್ಲ. ಈ ಪಕ್ಷವನ್ನೇ ಸೇರಬೇಕು ಎಂಬ ಬಗ್ಗೆ ನಾನೂ ಯಾವುದೇ ನಿರ್ಧಾರ ಮಾಡಿಲ್ಲ. ನಾನು ಎಲ್ಲ ಪಕ್ಷದ ಕಾರ್ಯಕರ್ತರ ಒತ್ತಾಸೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದೇನೆ. ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ' ಎಂದು ಸ್ಪಷ್ಟಪಡಿಸಿದರು.

ರೈತರು ಹಾಗೂ ಜಿಲ್ಲೆಯ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಈಗಾಗಲೇ ಸಂಸತ್ತು ಹಾಗೂ ಪ್ರಧಾನಿಯವರ ಗಮನ ಸೆಳೆದಿದ್ದು, ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ಪ್ರಧಾನಿಯಿಂದ ಸಿಕ್ಕಿದೆ ಎಂದರು....

ಫೋಟೋ - http://v.duta.us/AsVWKQEA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/SEbLfAAA

📲 Get Karnatakanews on Whatsapp 💬