ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗಿಳಿಸಲು ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತಿದೆ: ಯತ್ನಾಳ

  |   Karnatakanews

ವಿಜಯಪುರ: ಪ್ರವಾಹ ಸಂತ್ರಸ್ತರ ಬಗ್ಗೆ ಈ ಭಾಗದ ಜನಪ್ರತಿನಿಧಿಯಾಗಿ ನಾನು ಧ್ವನಿ ಎತ್ತದಿದ್ದರೆ ಬಿ. ಎಸ್. ಯಡಿಯೂರಪ್ಪ 15 ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಿತ್ತು. ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೊಂದು ಗಂಭೀರ ಆರೋಪ ಮಾಡಿದ್ದರೆ.

ಬುಧವಾರ ನಗರದ ಹೊರ ವಲಯದಲ್ಲಿರುವ ತಮ್ಮ ತೋಟದ ಮನೆಯಲ್ಲಿ ಪಕ್ಕದ ಕಾರ್ಯಕರ್ತರೊಂದಿಗೆ ಬನ್ನಿ ವಿನಿಮಯ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಇಬ್ಬರು ಕೇಂದ್ರ ಸಚಿವರು ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆಸಿದ್ದಾರೆ. ಪರಿಣಾಮ ಪ್ರಧಾನಿ ಭೇಟಿಗೆ ಸಿ.ಎಂ.ಗೆ ಅವಕಾಶ ಸಿಗದಂತೆ ಮಾಡಲಾಗುತ್ತಿದೆ. ಈ ಬಗ್ಗೆ ದೆಹಲಿಯಿಂದ ಈಗ ಮಾಹಿತಿ ಸಿಕ್ಕಿದೆ ಎಂದು ಪ್ರಹ್ಲಾದ್ ಜೋಶಿ, ಸದಾನಂದಗೌಡ ವಿರುದ್ಧ ಆರೋಪ ಮಾಡಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಭೇಟಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಆದರೆ, ರಾಜ್ಯದ ಸಚಿವರಿಬ್ಬರ ಕುತಂತ್ರದಿಂದ ಯಡಿಯೂರಪ್ಪ ಭೇಟಿಗೆ ಅವಕಾಶ ನಿರಾಕರಿಸಲಾಗುತ್ತದೆ. ಕೇಂದ್ರ ನಾಯಕರಿಗೆ ಈ ಇಬ್ಬರು ಸಚಿವರು ಯಡಿಯೂರಪ್ಪ ಅವರ ಬಗ್ಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆಸಿದ್ದಾರೆ ಎಂದು ನೇರ ಅರೋಪ ಮಾಡಿದ್ದಾರೆ....

ಫೋಟೋ - http://v.duta.us/vjcTVgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/-EfMPQAA

📲 Get Karnatakanews on Whatsapp 💬