ಸದನದಲ್ಲಿ ಕಾಂಗ್ರೆಸ್‌ ಇಲ್ಲ ಜೆಡಿಎಸ್‌ ಬೆಂಬಲ : ಕುಮಾರಸ್ವಾಮಿ ಸ್ಪಷ್ಟನೆ

  |   Karnatakanews

ಬೆಂಗಳೂರು : ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯದ ಸಮಸ್ಯೆಗೆ ಪಕ್ಷದ ವತಿಯಿಂದಲೇ ಹೋರಾಟ ರೂಪಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಜೆ.ಪಿ.ಭವನದಲ್ಲಿ ಅಧಿವೇಶದಲ್ಲಿ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ ಮಾಡಬೇಕು ಮತ್ತು ಉಪಚುನಾವಣೆ, ಮಧ್ಯಂತರ ಚುನಾವಣೆ ಸಿದ್ಧತೆ ಕುರಿತು ಶಾಸಕರು, ಮಾಜಿ ಶಾಸಕರು ಮತ್ತು ಮುಖಂಡರೊಂದಿಗೆ ಬುಧವಾರ ಸಭೆ ನಡೆಸಿ ನಂತರ ಮಾತನಾಡಿದ ಅವರು, ಅಧಿವೇಶನದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯದ ಸಮಸ್ಯೆಗಳಿಗೆ ಪಕ್ಷದ ವತಿಯಿಂದ ಹೋರಾಟ ಮಾಡುತ್ತೇವೆ. ಜಂಟಿ ಬೆಂಬಲ ಕೊಡುವ ಅಗತ್ಯವಿಲ್ಲ. ನಾವು ಏಕಾಂಗಿ ಹೋರಾಟ ಮಾಡುತ್ತೇವೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗಿಂತಲೂ ಶಕ್ತಿಯುತವಾಗಿದ್ದಾರೆ. ಅವರಿಗೆ ಹೆಚ್ಚಿನ ಸಂಖ್ಯೆಯ ಶಾಸಕರಿದ್ದಾರೆ. ನಮ್ಮ ಶಕ್ತಿ ಮೇಲೆ ಅವರಿಗೆ ಹೋರಾಟ ಮಾಡುವಂತದ್ದು ಏನಿಲ್ಲ. ನಮ್ಮ ಕೆಲಸ ನಾವು ಮಾಡುತ್ತೇವೆ. ಅವರ ಕೆಲಸ ಅವರು ಮಾಡುತ್ತಾರೆ. ರಾಜ್ಯದ ಜ್ವಲಂತ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುತ್ತೇವೆ. ಭೀಕರ ಪ್ರವಾಹ, ಮಳ ಹಾನಿ ಮತ್ತು ಬರ ನಿಭಾಯಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಬಿಜೆಪಿಯ ವೈಫ‌ಲ್ಯಗಳನ್ನು ಸದನದಲ್ಲಿ ಪ್ರಸ್ತಾಪಿಸಲಿದ್ದೇವೆ ಎಂದು ಹೇಳಿದರು....

ಫೋಟೋ - http://v.duta.us/IWiy1QAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/gPRBXgAA

📲 Get Karnatakanews on Whatsapp 💬