ಅಧಿಕಾರಿಗಳಿಗೆ ಜಿಪಂ ಸಿಇಒ ತರಾಟೆ

  |   Chitradurganews

ಚಳ್ಳಕೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಸರ್ಕಾರದ ಯೋಜನೆಗಳು ನಿಯಮಬದ್ಧವಾಗಿ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿರಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ ಹೇಳಿದರು.

ತಾಲೂಕಿನ ತಳಕು ಗ್ರಾಮದ ವಾಲ್ಮೀಕಿ ಭವನದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಅರಿತು ಪರಿಹಾರ ನೀಡುವ ನಿಟ್ಟಿನಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಪ್ರತಿಯೊಂದು ಹಂತದಲ್ಲೂ ನಿರ್ಲಕ್ಷ್ಯ ತಾಳಿರುವುದು ಎದ್ದು ಕಾಣುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರಾಜ್ಯ ಸರ್ಕಾರ ಮಹಾತ್ಮ ಗಾಂಧಿ  ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಅಸಮರ್ಪಕ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲಾಗುವುದು. ಗ್ರಾಮೀಣ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಯಾಗದೇ ತಿಂಗಳುಗಟ್ಟಲೆ ಗ್ರಾಮೀಣ ಭಾಗದ ಜನರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದು ಬೇಸರ ತರಿಸಿದೆ. ಸರ್ಕಾರ ಕುಡಿಯುವ ನೀರಿಗಾಗಿ ಎಷ್ಟು ಹಣ ಬೇಕಾದರೂ ನೀಡಲು ಸಿದ್ಧವಿದೆ. ಅದನ್ನು ಬಳಸಿಕೊಂಡು ಗ್ರಾಪಂಗಳು ಪಾರದರ್ಶಕವಾಗಿ ಆಡಳಿತ ನಡೆಸಬೇಕು ಎಂದು ತಾಕೀತು ಮಾಡಿದರು....

ಫೋಟೋ - http://v.duta.us/xExEJAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/r8GWdgAA

📲 Get Chitradurga News on Whatsapp 💬