"ಎಲೆಮರೆಯ ಕಾಯಿಗಳನ್ನು ಗುರುತಿಸಿದರೆ ಸಾಧನೆಗೆ ಹುರುಪು'

  |   Udupinews

ಉದಯವಾಣಿಯ ನೂತನ ಕಾರ್ಯಕ್ರಮ ಮಾಲಿಕೆ "ಜೀವನ ಕಥನ' ಮಕ್ಕಳಲ್ಲಿ ಸ್ವತಂತ್ರ ಆಲೋಚನಾ ಸಾಮರ್ಥ್ಯ ಬೆಳೆಸುವ ಸಲುವಾಗಿಯೇ ರೂಪುಗೊಂಡಿರುವಂಥದ್ದು. ಮಕ್ಕಳ ದಿನಾಚರಣೆ ಒಂದು ಅರ್ಥಪೂರ್ಣ ಆಚರಣೆಯಾಗಲಿ ಎಂಬ ಉದ್ದೇಶದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಟ್ಟು ಒಂಬತ್ತು ತಾಲೂಕುಗಳಲ್ಲಿ ವಿಭಿನ್ನ ವೃತ್ತಿ ಸಾಧಕರೊಂದಿಗೆ ಸಂವಾದ ಬುಧವಾರ ಏರ್ಪಡಿಸಲಾಗಿತ್ತು. ಎಲ್ಲೆಡೆಯೂ ಹತ್ತಕ್ಕೂ ಹೆಚ್ಚು ಶಾಲೆಗಳ ಮಕ್ಕಳು ಸಂವಾದದಲ್ಲಿ ಭಾಗವಹಿಸಿದರು. ಈ ಹೊಸ ಚಿಂತನೆ ಬದುಕಿನ ಹಲವು ಸಾಧ್ಯತೆಗಳನ್ನು ತೆರೆದಿಟ್ಟಿದೆ ಎಂಬ ಅಭಿಪ್ರಾಯ ಶಿಕ್ಷಣ ಅಧಿಕಾರಿಗಳಿಂದ, ಶಾಲಾ ಮುಖ್ಯಸ್ಥರಿಂದ ಕೇಳಿ ಬಂತು. ಹೊಸ ಮಾಲಿಕೆಗೆ ಸಹಕರಿಸಿದ ಎಲ್ಲ ಶಾಲೆಗಳಿಗೂ ಅಭಿನಂದನೆಗಳು.

ಕಾರ್ಕಳ: ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಯ ಕಾಯಿಗಳಂತಿರುವ ಹಲವಾರು ಪ್ರತಿಭೆಗಳನ್ನು ವರದಿಗಳ ಮೂಲಕ ಗುರುತಿಸಿ, ಪ್ರೋತ್ಸಾಹಿಸಿದ ಹಿರಿಮೆ

"ಉದಯವಾಣಿ'ಯದ್ದು. ಇದರಿಂದ ಅದೆಷ್ಟೋ ಗ್ರಾಮೀಣ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಮಿಂಚುವಂತಾಗಿದೆ...

ಇದು ಅಂತಾರಾಷ್ಟ್ರೀಯ ಪವರ್‌ಲಿಫ್ಟರ್‌ ಸ್ವಾತಿ ಯು.ಕೆ. ವ್ಯಕ್ತಪಡಿಸಿದ ಅಭಿಪ್ರಾಯ. ಸುವರ್ಣ ಸಂಭ್ರಮದಲ್ಲಿರುವ "ಉದಯವಾಣಿ'ಯು ಮಕ್ಕಳ ದಿನಾಚರಣೆಯ ಪ್ರಯುಕ್ತ ನ.13ರಂದು ಏರ್ಪಡಿಸಿದ ಸಾಧಕರ "ಜೀವನಕಥನ' ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಕಳ ಜೇಸೀಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೇಸೀಸ್‌ ಶಾಲೆ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು....

ಫೋಟೋ - http://v.duta.us/Ch-YLQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/ql6cowAA

📲 Get Udupi News on Whatsapp 💬