ಕಲಬುರಗಿ: ಶಂಕಿತ ಡೆಂಘೀಗೆ ಏಳು ಸಾವು

  |   Kalburaginews

„ರಂಗಪ್ಪ ಗಧಾರ

ಕಲಬುರಗಿ: ಜಿಲ್ಲಾದ್ಯಂತ ಕಳೆದ ಮೂರು ತಿಂಗಳಿಂದ ಸಾಂಕ್ರಾಮಿಕ ರೋಗಗಳ ಆರ್ಭಟ ಹೆಚ್ಚಾಗಿದೆ. ಮಕ್ಕಳಿಂದ ಹಿಡಿದು ಯುವಕರು, ವಯೋವೃದ್ಧರು ಮಹಾಮಾರಿ ಡೆಂಘೀ ಜ್ವರ ಮತ್ತು ಚಿಕೂನ್‌ ಗುನ್ಯಾ ರೋಗಕ್ಕೆ ತುತ್ತಾಗಿ, ಬಳಲುತ್ತಿದ್ದಾರೆ. ಅಕ್ಟೋಬರ್‌ನಿಂದ ಇದುವರೆಗೆ ಶಂಕಿತ ಡೆಂಘೀ ಜ್ವರಕ್ಕೆ ಏಳು ಜನರು ಬಲಿಯಾಗಿದ್ದಾರೆ.

ತಾಲೂಕು ಕೇಂದ್ರಗಳಿಂದ ಹೆಚ್ಚಾಗಿ ಮಹಾನಗರ ವ್ಯಾಪ್ತಿಯಲ್ಲಿ ಮಾರಣಾಂತಿಕ ಡೆಂಘೀ ಜ್ವರ ಉಲ್ಬಣಗೊಂಡಿದೆ. ಜಿಲ್ಲಾಸ್ಪತ್ರೆ ಮತ್ತು ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್‌) ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ಡೆಂಘೀ ರೋಗಿಗಳ ಸಂಖ್ಯೆ ಅಧಿಕವಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರ ಮತ್ತು ಬೆಂಗಳೂರು ಆಸ್ಪತ್ರೆಗಳತ್ತ ರೋಗಿಗಳು ಮುಖ ಮಾಡುವಂತೆ ಆಗಿದೆ.

ಏಳು ಶಂಕಿತರ ಸಾವು: ಜಿಲ್ಲೆಯಲ್ಲಿ ಪ್ರಸ್ತಕ ವರ್ಷದ ಆರಂಭದಿಂದ ಇದುವರೆಗೆ (ನ.12ಕ್ಕೆ) 353 ಡೆಂಘೀ ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 37 ಹೊರ ಜಿಲ್ಲೆಗಳ ರೋಗಿಗಳು ಸೇರಿದ್ದಾರೆ. ಆಘಾತಕಾರಿ ಅಂಶವೆಂದರೆ ಶಂಕಿತ ಡೆಂಘೀ ಜ್ವರದಿಂದ ಏಳು ಜನರು ಮೃತಪಟ್ಟಿದ್ದಾರೆ. ಇದರಲ್ಲಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಐವರು ಮೃತಪಟ್ಟಿದ್ದರೆ, ಮತ್ತಿಬ್ಬರು ಸೊಲ್ಲಾಪುರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ....

ಫೋಟೋ - http://v.duta.us/iUb4XwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/GSimLwAA

📲 Get Kalburagi News on Whatsapp 💬