ದೌರ್ಜನ್ಯಕ್ಕೀಡಾದ ಮಹಿಳೆ ನೋವಿಗೆ ಸ್ಪಂದಿಸಿ

  |   Chikkamagalurunews

ಚಿಕ್ಕಮಗಳೂರು: ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಾಂತ್ವನ ಹೇಳುವುದರೊಂದಿಗೆ ಅವರಿಗೆ ಅಗತ್ಯ ಕಾನೂನಡಿ ನೆರವು, ಚಿಕಿತ್ಸೆ ಹಾಗೂ ಪರಿಹಾರ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಜಿಲ್ಲಾ ಸಮನ್ವಯ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ, ಮಹಿಳೆಯರ ಮತ್ತು ಮಕ್ಕಳ ಸಾಗಾಟ ನಿವಾರಣೆ ಯೋಜನೆ, ಬಾಲ್ಯ ವಿವಾಹ ನಿಷೇಧ ಕಾನೂನು ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಮಹಿಳಾ ವಿಶೇಷ ಚಿಕಿತ್ಸಾ ಘಟಕದಲ್ಲಿ ವೈದ್ಯಕೀಯ ಚಿಕಿತ್ಸೆ, ಸಮಾಲೋಚನೆ, ಪೊಲೀಸ್‌ ಹಾಗೂ ಕಾನೂನಿನ ನೆರವನ್ನು ಒಂದೇ ಸೂರಿನಡಿ ನೀಡಲಾಗುತ್ತಿದೆ. ಈ ಘಟಕಗಳು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿದ್ದು, ಉಚಿತ ಸಹಾಯವಾಣಿ ಸಂಖ್ಯೆ 181 ಆಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯದ 84 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 24 ಈಗಾಗಲೇ ಇತ್ಯರ್ಥಗೊಂಡಿವೆ. 45 ಪ್ರಕರಣಗಳು ನ್ಯಾಯಾಲಯದಲ್ಲಿ ಉಳಿದಿವೆ. 15 ಸಮಾಲೋಚನೆಗೆ ಇವೆ. ಇವುಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಅಧಿಕಾರಿಗಳು ಪ್ರಕರಣಗಳ ಅನುಪಾಲನೆಯನ್ನು ಮಾಡಿ ದೌರ್ಜನ್ಯಕ್ಕೊಳ್ಳಗಾದವರಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು....

ಫೋಟೋ - http://v.duta.us/-SxtlAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/C79znAAA

📲 Get Chikkamagaluru News on Whatsapp 💬