ಪ್ಲಾಸ್ಟಿಕ್ ನಿಷೇಧ ಜಾರಿಗೆ ಕ್ರಮ: ಡಿಸಿ

  |   Shimoganews

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ನಿಷೇಧವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಘನತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್‌ ನಿಷೇಧ ಜಾರಿ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಹಲವು ಬಾರಿ ಸೂಚನೆಗಳನ್ನು ನೀಡಲಾಗಿದ್ದು, ಇನ್ನೂ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ನಿಷೇಧ ಪರಿಣಾಮಕಾರಿಯಾಗಿ ಆನುಷ್ಠಾನಗೊಂಡಿಲ್ಲ. ಕಳೆದ 15 ದಿನಗಳಲ್ಲಿ 575 ಕೆಜಿ ಪ್ಲಾಸ್ಟಿಕ್‌ ಜಪ್ತಿ ಮಾಡಲಾಗಿದ್ದು, ಅದರೊಂದಿಗೆ ದಂಡವನ್ನು ಸಹ ವಿ ಧಿಸಬೇಕು. ಈ ಕುರಿತು ಮಹಾನಗರ ಪಾಲಿಕೆ ಯಲ್ಲಿ ನಿರ್ಣಯ ಕೈಗೊಂಡು ನಾಳೆಯಿಂದಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಈ ಸೂಚನೆಗಳನ್ನು ಜಾರಿಗೊಳಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಪ್ಲಾಸ್ಟಿಕ್‌ ಜಪ್ತಿ ಮಾಡಲು ನಿರಂತರ ದಾಳಿ ನಡೆಸಬೇಕು. ಪ್ಲಾಸ್ಟಿಕ್‌ ನಗರದ ಒಳಗೆ ಪ್ರವೇಶವಾಗುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಪ್ಲಾಸ್ಟಿಕ್‌ ಮಾರಾಟ ಮಾಡುವವರು ಹಾಗೂ ಪಡೆಯುವವರ ಮೇಲೆಯೂ ದಂಡ ವಿ ಧಿಸಬೇಕು ಎಂದರು....

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/yMa7owAA

📲 Get Shimoga News on Whatsapp 💬