"ಮೈತ್ರಿ ಸರಕಾರದಂತೆ ಈ ಸರಕಾರವೂ ಸಂತ್ರಸ್ತರಿಗೆ ಸ್ಪಂದಿಸಲಿ '

  |   Kodagunews

ಮಡಿಕೇರಿ: ಕೊಡಗಿನ ಮಳೆಹಾನಿ ಸಂತ್ರಸ್ತರ ಸಂಕಷ್ಟಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸುಮಾರು 800 ಕುಟುಂಬಗಳಿಗೆ ನೂತನ ಮನೆಗಳನ್ನು ನಿರ್ಮಿಸಿಕೊಡುವ ಯೋಜನೆಯನ್ನು ರೂಪಿಸುವ ಮೂಲಕ ಹಿಂದಿನ ಮೈತ್ರಿ ಸರ್ಕಾರ ಇಡೀ ದೇಶಕ್ಕೇ ಮಾದರಿಯಾಗಿತ್ತು ಎಂದು ಅಭಿಪ್ರಾಯಪಟ್ಟಿರುವ ವಿಧಾನಮಂಡಲ ಸಭೆಯ ಕಾಗದ ಪತ್ರಗಳ ಸಮಿತಿಯ ಅಧ್ಯಕ್ಷರಾದ ಸಾ.ರಾ. ಮಹೇಶ್‌ ಈಗಿನ ಸರ್ಕಾರ ಕೂಡ ಸಂತ್ರಸ್ತರ ನೋವಿಗೆ ಮಿಡಿಯಲಿ ಎಂದು ಹೇಳಿದ್ದಾರೆ.

2018ರಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದ ತಕ್ಷಣ ಪರಿಹಾರಕ್ಕಾಗಿ ಒಂದು ಲಕ್ಷ ರೂ., ಮನೆಯಲ್ಲಿನ ವಸ್ತುಗಳನ್ನು ಕಳೆದುಕೊಂಡವರಿಗೆ 50 ಸಾವಿರ ರೂ. ಹೀಗೆ ಸಂತ್ರಸ್ತರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ ನೆಮ್ಮದಿ ಮತ್ತು ಸ್ವಾಭಿಮಾನದ ಬದುಕು ನಡೆಸಲು ಸರ್ಕಾರ ಶ್ರಮಿಸಿದೆ ಎಂದು ಅವರು ಹೇಳಿದರು.

ಶಾಸಕರಾದ ಯು.ಟಿ. ಖಾದರ್‌ ಅವರು ಮಾತನಾಡಿ 2018ರಲ್ಲಿ ಪ್ರಕೃತಿ ವಿಕೋಪದಿಂದಾಗಿ ಮನೆ ಕಳೆದುಕೊಂಡವರಿಗೆ 9.85 ಲಕ್ಷ ರೂ. ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಿರುವುದು ಇಡೀ ದೇಶದಲ್ಲಿಯೇ ಮಾದರಿಯಾಗಿದೆ ಎಂದು ಅವರು ಹೇಳಿದರು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಂತ್ರಸ್ತರಿಗೆ ಮನೆ ನಿರ್ಮಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ವಸತಿ ಸಚಿವರು ಹಾಗೆಯೇ ಇತರರೊಂದಿಗೆ ಚರ್ಚಿಸಿ ಎರಡು ಬೆಡ್‌ ರೂಂ ಒಳಗೊಂಡ ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿತ್ತು. ಆ ನಿಟ್ಟಿನಲ್ಲಿ ಮಾದರಿ ಮನೆಗಳನ್ನು ನಿರ್ಮಿಸಲಾಗಿದೆ ಎಂದರು....

ಫೋಟೋ - http://v.duta.us/X-sADAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/HwxdrQAA

📲 Get Kodagu News on Whatsapp 💬