ಸಮಗ್ರ ಕೃಷಿ ಪದ್ಧತಿಯಿಂದ ರೈತರ ಜೀವನ ಸುಧಾರಣೆ
ರಾಮನಗರ: ರೈತರು ಕೃಷಿ ಜೊತೆಗೆ ಹೈನುಗಾರಿಕೆ, ಜೇನು ಸಾಕಾಣಿಕೆ, ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಸಲಹೆ ನೀಡಿದರು. ನಗರದ ಜಿಲ್ಲಾ ಪಂಚಾಯ್ತಿ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿದ್ದ ಜೇನು ಮೇಳ ಉದ್ಘಾಟಿಸಿ ಮಾತನಾಡಿದರು.
ಕೃಷಿಯಲ್ಲಿ ವಿಶ್ವಾಸವಿಟ್ಟು ನಿಷ್ಠೆಯಿಂದ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳುಬೇಕು. ಇವರಿಗೆ ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಅಗತ್ಯ ಮಾಹಿತಿ ಕೊಡಬೇಕು. ವಿಶೇಷವಾಗಿ ಹೊಸ ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಕೊಡುವಂತೆ ಅಧಿಕಾರಿಗಳಿಗೆ ತಾಖೀತು ಮಾಡಿದರು.
ಗಿಡಗಳಲ್ಲಿ ಜೇನು ಹುಳುಗಳು ಪರಾಗಸ್ಪರ್ಶ ಕ್ರಿಯೆಗೆ ಸಹಕರಿಸುವುದರಿಂದ ತಮ್ಮ ಬೆಳೆಯ ಇಳುವರಿಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಿದೆ ಎಂದರು.
ಜೇನು ಮೇಳಕ್ಕೆ ತಾಪಂ ಅಧ್ಯಕ್ಷರ ಶ್ಲಾಘನೆ: ರಾಮನಗರ ತಾಪಂ ಅಧ್ಯಕ್ಷ ಗಾಣಕಲ್ ನಟರಾಜು ಮಾತನಾಡಿ, ಜಿಲ್ಲೆ ಹೈನುಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಹೆಸರು ವಾಸಿಯಾಗಿದ್ದು, ಜೇನು ಸಾಕಾಣಿಕೆ ಬಗ್ಗೆ ಜಿಲ್ಲೆಯ ರೈತರಿಗೆ ಅರಿವು ಮೂಡಿ ಸುತ್ತಿರುವುದು ಶ್ಲಾಘನೀಯ ಎಂದರು.
ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ಕೊಟ್ಟು ಕಾರ್ಯಕ್ರಮ ಆಯೋಜಿಸಿ ಅವರನ್ನು ಉತ್ತೇಜಿಸಬೇಕು ಎಂದರು. ಜೇನು ಸಾಕಾಣಿಕೆಯ ಬಗ್ಗೆ ವಿಶೇಷವಾಗಿ ರೈತ ಮಹಿಳೆಯರಿಗೆ ತರಬೇತಿಯ ಅವಶ್ಯಕತೆ ಇದೆ. ಮಹಿಳಾ ಸಂಘಗಳ ಮೂಲಕ ಈ ಕಾರ್ಯಕ್ರಮ ಹಮ್ಮಿಕೊಳ್ಳಬಹುದು ಎಂದು ಸಲಹೆ ನೀಡಿದರು....
ಫೋಟೋ - http://v.duta.us/RaCPIAAA
ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/TgIOawAA