15 ಕ್ಷೇತ್ರಗಳ ಉಪ ಚುನಾವಣೆಯ ಕಣ ಚಿತ್ರಣ

  |   Karnatakanews

ಸುಪ್ರೀಂಕೋರ್ಟ್‌ ತೀರ್ಪಿನಿಂದ ಅನರ್ಹತೆಗೊಂಡಿದ್ದ ಹದಿನೈದು ಶಾಸಕರು ಸದ್ಯ ನಿರಾಳಗೊಂಡಿದ್ದು, ಮೂರೂ ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಾರಣರಾದ ಅನರ್ಹ ಶಾಸಕರು ಅಥವಾ ಅವರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತೆ ಆಯ್ಕೆಯಾಗುವ ಮೂಲಕ ಸರ್ಕಾರವನ್ನು ಭದ್ರಪಡಿಸಿಕೊಳ್ಳಲೇ ಬೇಕಾದ ಸವಾಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಮುಂದಿದ್ದು, 15 ಕ್ಷೇತ್ರಗಳ ಉಪ ಚುನಾವಣೆ ಕುತೂಹಲ ಮೂಡಿಸಿದೆ...

ಚಿಕ್ಕಬಳ್ಳಾಪುರ: ಸುಧಾಕರ್‌ ಬಿಜೆಪಿನಾ, ಪಕ್ಷೇತರನಾ?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣಾ ಕದನ ಸಾಕಷ್ಟು ರಂಗೇರಲಿದ್ದು, ಅಖಾಡದ ಚಿತ್ರಣವೇ ಬದಲಾಗುವ ಸಾಧ್ಯತೆ ಇದೆ. ಡಾ.ಕೆ.ಸುಧಾಕರ್‌ ಅವರ ಸ್ಪರ್ಧೆ ಸದ್ಯಕ್ಕೆ ಸ್ವತಂತ್ರನಾ? ಅಥವಾ ಬಿಜೆಪಿಯಿಂದಲಾ? ಎಂಬ ಗೊಂದಲವಿದೆ. ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಸುಧಾಕರ್‌ ಈ ಬಗ್ಗೆ ಇನ್ನೂ ಗೊಂದಲದಲ್ಲಿದ್ದಾರೆ. ಆದರೆ, ಸುಧಾಕರ್‌ ಸ್ಪರ್ಧೆಯಿಂದ ಚುನಾವಣಾ ಅಖಾಡ ಸಾಕಷ್ಟು ಸದ್ದು ಮಾಡುವುದಂತೂ ನಿಶ್ಚಿತ. ಸದ್ಯ ಕಾಂಗ್ರೆಸ್‌, ನಂದಿ ಅಂಜನಪ್ಪಗೆ ಟಿಕೆಟ್‌ ಘೋಷಣೆ ಮಾಡಿದ್ದರೂ, ಸುಧಾಕರ್‌ ಸ್ಪರ್ಧೆ ಖಚಿತವಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ತನ್ನ ಅಭ್ಯರ್ಥಿ ಬದಲಾವಣೆ ಕುರಿತು ಸಾಕಷ್ಟು ಚಿಂತನೆ ನಡೆಸಿದೆ ಎಂಬ ಮಾತು ಕೇಳಿ ಬರುತ್ತಿದೆ. ಅಂಜನಪ್ಪ ಆಯ್ಕೆಗೆ ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ವಿರೋಧಿಸಿದರೆ, ಎನ್‌.ಎಚ್‌.ಶಿವಶಂಕರರೆಡ್ಡಿ ಅಭ್ಯರ್ಥಿ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಜೆಡಿಎಸ್‌ನಲ್ಲಿ ಎರಡನೇ ಹಂತದ ಮುಖಂಡರು ಈಗಾಗಲೇ ಕಾಂಗ್ರೆಸ್‌ ಸೇರಿಕೊಂಡು ಅಂಜನಪ್ಪ ಪರ ಬಹಿರಂಗವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಜೆಡಿಎಸ್‌ನ ಮಾಜಿ ಶಾಸಕ ಬಚ್ಚೇಗೌಡ ಸ್ಪರ್ಧೆಗೆ ನಿರಾಸಕ್ತಿ ತೋರಿದ್ದು, ತಮ್ಮ ಬದಲಿಗೆ ಮತ್ತೂಬ್ಬ ಅಭ್ಯರ್ಥಿಯ ಹುಡುಕಾಟ ನಡೆಸುವಂತೆ ವರಿಷ್ಠರಿಗೆ ಸೂಚಿಸಿದ್ದಾರೆ. ಹೀಗಾಗಿ, ಜೆಡಿಎಸ್‌ ಸ್ಪರ್ಧೆ ಅನುಮಾನವಾಗಿದ್ದು, ಯಾರನ್ನು ಬೆಂಬಲಿಸುತ್ತದೆ ಎನ್ನುವ ಕುತೂಹಲವಿದೆ....

ಫೋಟೋ - http://v.duta.us/VvqEBAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/cpdlrQEA

📲 Get Karnatakanews on Whatsapp 💬