ಅಧಿಕಾರಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

  |   Ramnagaranews

ರಾಮನಗರ: ಡಾ.ಬಿ.ಆರ್‌. ಅಂಬೇಡ್ಕರ್‌ ಬಗ್ಗೆ ಸಾರ್ವಜನಿಕರು ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ಅನುಮಾನ ಹುಟ್ಟಿಸುವಂತ ಕೆಲಸವನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಮೂಲಕ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ವಿಭಾಗದ ಅಧ್ಯಕ್ಷ ರಾಂಪುರ ನಾಗೇಶ್‌ ದೂರಿದರು.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರುಗಳು ಬಾಬಾ ಸಾಹೇಬ್‌ ಅಂಬೇಡ್ಕರ್‌ ವಿರೋಧಿ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ನಗರದ ಐಜೂರು ವೃತ್ತದಲ್ಲಿ ನಡೆದ ಪ್ರತಿಭಟನೆಯ ವೇಳೆ ಅವರ ಮಾತನಾಡಿದರು. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಬೇಕು ಹಾಗೂ ದಲಿತ ವಿರೋಧಿ ನೀತಿಗಳನ್ನು ಜಾರಿ ಮಾಡಲು ಹೊರಟಿರುವ ಶಿಕ್ಷಣ ಸಚಿವ ಸುರೇಶ್‌ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಡಾ.ಬಿ.ಆರ್‌. ಅಂಬೇಡ್ಕರ್‌ ಸಂವಿಧಾನ ರಚನೆ ಮಾಡಿದ್ದಾರೆ ಎಂಬುದು ಈಗಾಗಲೆ ಎಲ್ಲರಿಗೂ ಗೊತ್ತಿರುವ ವಿಚಾರ. ಅನೇಕ ಸಂದರ್ಭಗಳಲ್ಲಿ ಇದು ನಿರೂಪಿತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬಿಜೆಪಿ ಸರ್ಕಾರದಲ್ಲಿ ಕೆಲವು ಅಧಿಕಾರಿಗಳು ಬಾಬಾ ಸಾಹೇಬರ ಬಗ್ಗೆ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಠಿಸಲು ಮುಂದಾಗಿದ್ದಾರೆ....

ಫೋಟೋ - http://v.duta.us/PaxSvQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/5V1FtwAA

📲 Get Ramnagara News on Whatsapp 💬