ಅಂಬೇಡ್ಕರ್‌ಗೆ ಅಪಮಾನ: ಖಂಡನೆ

  |   Hassannews

ಸಕಲೇಶಪುರ: ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿರುವ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಉಮಾಶಂಕರ್‌ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಾಲೂಕು ದಲಿತ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮಂಜುನಾಥ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ದಲಿತರ ಪರ ಸಂಘಟನೆಗಳ ಒಕ್ಕೂಟದ ಸಮಿತಿ ಅಧ್ಯಕ್ಷ ಕಾಡಪ್ಪ ಮಾತನಾಡಿ, ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಉಮಾಶಂಕರ್‌ ಅವರು ಅ.28ರಂದು ಹೊರಡಿ ಸಿರುವ ಶಿಕ್ಷಣ ಇಲಾಖೆ ಸುತ್ತೋಲೆ ಭಾರತದ ಸಂವಿಧಾನವನ್ನು ಅಂಬೇಡ್ಕರ್‌ ಅವರು ರಚಿಸಿಲ್ಲ, ಸಂವಿಧಾನವನ್ನು ಅನೇಕಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದಾಗಿ ಪಠ್ಯದಲ್ಲಿ ಸೇರ್ಪಡೆಗೊಳಿಸಿದ್ದಾರೆ ಎಂದು ಆಪಾದಿಸಿದರು. ಈ ಸುತ್ತೋಲೆಯಿಂದ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಲು ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂವಿಧಾನ ರಚನಾ ಸಮಿತಿ: 1947ರ ಆ.15 ರಂದು ನಮ್ಮ ಭಾರತಕ್ಕೆ ಸ್ವಾತಂತ್ರ ಸಿಕ್ಕಿದ ನಂತರ ಅಂದಿನ ರಾಷ್ಟ್ರಪತಿ ಡಾ.ರಾಜೇಂದ್ರ  ಪ್ರಸಾದ್‌ ಅವರಿಂದ ನೇಮಕಗೊಂಡ ಭಾರತದ ಸಂವಿಧಾನ ರಚಿಸುವ ಜವಾಬ್ದಾರಿಯನ್ನು 7 ಜನರ ಸಮಿತಿಯ ಸದಸ್ಯರಿಗೆ ನೀಡಲಾಗಿತ್ತು. ಆದರೆ ಸಮಿತಿ ಸದಸ್ಯರು ಸಂವಿಧಾನ ರಚನೆಯ ಜವಾಬ್ದಾರಿಯನ್ನು ನಿರ್ವಹಿಸದೇ ತಟಸ್ಥರಾಗಿದ್ದರು ಎಂದರು....

ಫೋಟೋ - http://v.duta.us/DUGilgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/XWm45AAA

📲 Get Hassan News on Whatsapp 💬