ಅಭಿವೃದ್ಧಿಯಲ್ಲಿ 'ಸಹಕಾರ' ಪಾತ್ರ ಹಿರಿದು

  |   Bidarnews

ಬೀದರ: ದೇಶದ ಅಭಿವೃದ್ಧಿಯ ವೇಗ ಹೆಚ್ಚಿಸುವಲ್ಲಿ ಸಹಕಾರ ಕ್ಷೇತ್ರದ ಪಾತ್ರ ಹಿರಿದಾಗಿದೆ ಎಂದು ಡಿಸಿಸಿ ಬ್ಯಾಂಕ್‌ ಹಾಗೂ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ನಗರದ ಡಿಸಿಸಿ ಬ್ಯಾಂಕಿನ ಡಾ|ಗುರುಪಾದಪ್ಪ ನಾಗಮಾರಪಳ್ಳಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಖೀಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಕ್ಷೇತ್ರದ ಮೂಲಕ ಎಲ್ಲರ ಕಲ್ಯಾಣ ಸಾಧ್ಯವಿದೆ. ಶತಮಾನದ ಇತಿಹಾಸ ಹೊಂದಿರುವ ಸಹಕಾರ ಕ್ಷೇತ್ರವು ಇನ್ನಷ್ಟು ಬೆಳೆಯಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಅಭಿವೃದ್ಧಿಗೆ ನೆರವಾಗುವ ಎಲ್ಲ ಕ್ಷೇತ್ರಗಳಲ್ಲಿ ಸಹಕಾರ ಕ್ಷೇತ್ರ ಹಾಸುಹೊಕ್ಕಾಗಿದೆ. ಸಕ್ಕರೆ ಉದ್ಯಮ, ಜವಳಿ ಉದ್ಯಮಗಳು ಬೆಳೆದಿರುವುದೇ ಸಹಕಾರ ಕ್ಷೇತ್ರದಲ್ಲಿ. ಗೊಬ್ಬರ ತಯಾರಿಕೆಗೆ ಹೆಸರಾದ ಇಪ್ಕೋ ಸಹಕಾರ ತತ್ವದಡಿ ನಡೆಯುತ್ತಿದೆ. ಸಹಕಾರ ಕ್ಷೇತ್ರದಲ್ಲಿನ ಬ್ಯಾಂಕ್‌ಗಳು ಅತ್ಯುತ್ತಮ ರೀತಿಯಲ್ಲಿ ನಡೆಯುತ್ತಿವೆ. ಸಹಕಾರ ತತ್ವದಡಿ ನಡೆಯುತ್ತಿರುವ ಹಾಲು ಒಕ್ಕೂಟಗಳೂ ರೈತರ ಏಳ್ಗೆಗೆ ಮಹತ್ವದ ಕೊಡುಗೆ ನೀಡುತ್ತಿವೆ ಎಂದು ಹೇಳಿದರು.

ಆರಂಭದ ದಿನಗಳಲ್ಲಿ ಹಲವು ಮಿತಿಗಳಿದ್ದವು. ಚೌಕಟ್ಟಿನ ಒಳಗೆಯೇ ಕೆಲಸ ಮಾಡುವ ಸ್ಥಿತಿ ಇತ್ತು. ಸ್ವಾಮಿನಾಥನ್‌ ವರದಿ ಮತ್ತು 2012ರ ಕಾಯ್ದೆ ತಿದ್ದುಪಡಿ ನಂತರ ಸಹಕಾರ ಕ್ಷೇತ್ರ ಹೆಚ್ಚು ಬಲಿಷ್ಠವಾಗಿದೆ. ಸ್ವಾಯತ್ತ ಸಂಸ್ಥೆಯಾಗಿ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗಿದೆ ಎಂದರು....

ಫೋಟೋ - http://v.duta.us/Gk5AfgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/iNiINgAA

📲 Get Bidar News on Whatsapp 💬