ಅವೈಜ್ಞಾನಿಕ ಯೋಜನೆಗಳಿಂದ ಆತಂಕಕಾರಿ ಬೆಳವಣಿಗೆ

  |   Kodagunews

ಮಡಿಕೇರಿ: ನವಪೀಳಿಗೆಗೆ ಪರಿಸರ ಸಂರಕ್ಷಣೆಯ ಪ್ರಜ್ಞೆ ಮೂಡಿಸುವ ಕೆಲಸವಾಗಬೇಕಿದೆ ಎಂದು ಅರೆಮಾದನಹಳ್ಳಿಯ ಶ್ರೀಶಿವಸುಜ್ಞಾನತೀರ್ಥ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾವೇರಿ ಮಹಾ ಆರತಿ ಬಳಗ, ಕಾವೇರಿ ರಿವರ್‌ ಸೇವಾ ಟ್ರಸ್ಟ್‌, ಕಾವೇರಿ ನದಿ ಸ್ವಚ್ಚತಾ ಆಂದೋಲನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿಗೆ ನಡೆದ 100ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ‌ ಸುನಿಲ್‌ ಸುಬ್ರಮಣಿ, ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ನದಿ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸಲು ಸರಕಾರದ ಮಟ್ಟದಲ್ಲಿ ಕಾರ್ಯ ಯೋಜನೆ ರೂಪಿಸಲು ಪ್ರಸ್ತಾಪಿಸುವುದಾಗಿ ಭರವಸೆ ವ್ಯಕ್ತಪಡಿಸಿದರು. ನದಿ ಸ್ವಚ್ಚತೆ, ಸಂರಕ್ಷಣೆ ಬಗ್ಗೆ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಬೆಂಬಲ ಸೂಚಿಸುವಂತೆ ಅವರು ಕರೆ ನೀಡಿದರು.

ನದಿ ಸ್ವಚ್ಚತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್‌.ಚಂದ್ರಮೋಹನ್‌ ಪ್ರಾಸ್ತಾವಿಕ ನುಡಿಗಳಾಡಿದರು.

ಕಾರ್ಯಕ್ರಮದಲ್ಲಿ 100 ತಿಂಗಳುಗಳ ಕಾಲ ನಿರಂತರವಾಗಿ ಆರತಿ ಪೂಜೆ ಸಲ್ಲಿಸಿದ ಅರ್ಚಕ ಕೃಷ್ಣಮೂರ್ತಿ ಭಟ್‌ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು....

ಫೋಟೋ - http://v.duta.us/Cn9towAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/RdEhswAA

📲 Get Kodagu News on Whatsapp 💬