ಉಡುಪಿ ಮಕ್ಕಳ ಸ್ನೇಹಿ ಜಿಲ್ಲೆಯಾಗಲಿ: ಜಿ.ಪಂ. ಅಧ್ಯಕ್ಷರ ಆಶಯ

  |   Udupinews

ಉಡುಪಿ: ಉಡುಪಿ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ರೂಪಿಸಲು ಜಿಲ್ಲಾಡಳಿತದೊಂದಿಗೆ ವಿವಿಧ ಸ್ವಯಂ ಸೇವಾ ಸಂಘಟನೆಗಳು ಸೇರಿದಂತೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಅವರು ಗುರುವಾರ ಜಿಲ್ಲಾಡಳಿತ, ಜಿ. ಪಂ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೋಟರಿ ಉಡುಪಿ ಮತ್ತು ಚೈಲ್ಡ್‌ ಹೆಲ್ಪ್ಲೈನ್‌ ಸಹಯೋಗದಲ್ಲಿ ವಳಕಾಡು ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್‌ ಲೈನ್‌ ಸೇ ದೋಸ್ತಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮಕ್ಕಳ ಹಕ್ಕು ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆ ಬಾರದ ಸಮಾಜ ನಿರ್ಮಾಣ ಮಾಡುವ ಮೂಲಕ ಹಾಗೂ ಚೈಲ್ಡ್‌ ಹೆಲ್ಪ್ ಲೈನ್‌ನ ಕಾರ್ಯಗಳಿಗೆ ಎÇE ರೀತಿಯ ಬೆಂಬಲ ನೀಡುವ ಮೂಲಕ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯಾಗಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಮಕ್ಕಳಿಗೆ ನೀಡುವ ಶಿಕ್ಷಣ ಮಟ್ಟದಲ್ಲಿ ಇನ್ನಷ್ಟು ಸುಧಾರಣೆ ಆಗಬೇಕಿದೆ ಹಾಗೂ ಮಕ್ಕಳಲ್ಲಿನ ಬುದ್ಧಿವಂತಿಕೆಯನ್ನು ಬಳಸಿಕೊಳ್ಳಲು ಸೂಕ್ತ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.

ಪ್ರತಿಜ್ಞಾವಿಧಿ ಬೋಧನೆ

ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಗದೀಶ್‌, ಜವಾಹರ ಲಾಲ್‌ ನೆಹರೂ ಅವರಿಗೆ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ಇದ್ದು, ಇಂದಿನ ಮಕ್ಕಳೇ ಮುಂದಿನ ಭಾರತ, ಭಾರತ ಸದೃಢವಾಗಲು ಮಕ್ಕಳನ್ನು ಸದೃಢರನ್ನಾಗಿ ಮಾಡಬೇಕು ಎಂದು ಹೇಳಿದ್ದರು, ಮಕ್ಕಳಿಗೆ ಶಿಸ್ತು ಕಲಿಸುವುದು ಮಾತ್ರವಲ್ಲ ಅವರ ಭಾವನೆಗಳನ್ನು ಅರಿಯುವುದರ ಬಗ್ಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವವರು ತಿಳಿದಿರಬೇಕು, ಶಿಸ್ತಿನ ಹೆಸರಲ್ಲಿ ಮಕ್ಕಳನ್ನು ಕಟ್ಟಿಹಾಕಬೇಡಿ, ಮಕ್ಕಳ ದಿನಾಚರಣೆ, ಮಕ್ಕಳ ಹುಟ್ಟುಹಬ್ಬದ ದಿನವಾದರೂ ಮಕ್ಕಳಿಗೆ ಅವರ ಇಷ್ಟದ ಉಡುಪು ಧರಿಸಿ ಶಾಲೆಗೆ ಬರಲು ಅವಕಾಶ ನೀಡಿ, ಶಿಕ್ಷಣ ಎಂಬುದು ಮಕ್ಕಳಿಗೆ ಪಠ್ಯ ಮಾತ್ರವಾಗದೆ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರಲಿ. ಮಕ್ಕಳಲ್ಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಿ ಪೋ›ತ್ಸಾಹಿಸಬೇಕು ಎಂದು ಹೇಳಿದರು....

ಫೋಟೋ - http://v.duta.us/Z-boqQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/ko3EoAAA

📲 Get Udupi News on Whatsapp 💬