ಕೊಟ್ಟ ಮಾತಿಗೆ ಎಂದೂ ತಪ್ಪಲಾರೆ: ಬಿಎಸ್‌ವೈ

  |   Karnatakanews

ಬೆಂಗಳೂರು: ತಮ್ಮ ಶಾಸಕ ಸ್ಥಾನವನ್ನು ತ್ಯಾಗ ಮಾಡಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿರುವ ಎಲ್ಲ ಮಾಜಿ ಶಾಸಕರಿಗೂ ಸಚಿವ ಸ್ಥಾನ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಅನರ್ಹ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡು ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಕಾರಣರಾಗಿರುವ 17 ಮಂದಿಗೂ ಮಾತು ಕೊಟ್ಟಂತೆ ನಡೆದುಕೊಳ್ಳುತ್ತೇನೆ. ಅವರು ಎಲ್ಲವನ್ನೂ ತ್ಯಾಗ ಮಾಡಿ¨ªಾರೆ. ಅವರನ್ನು ಗೆಲ್ಲಿಸಿಕೊಂಡು ಬರುವುದು ಬಿಜೆಪಿ ಜವಾಬ್ದಾರಿ. ಪಕ್ಷದ ಮುಖಂಡರು ಒಡಕಿನ ಮಾತನಾಡದೆ ಅವರ ಗೆಲುವಿಗೆ ಶ್ರಮಿಸಬೇಕು. ಯಾವುದೇ ರೀತಿಯಲ್ಲಿ ಅವರಿಗೆ ತೊಂದರೆಯಾಗದಂತೆ ತನು-ಮನ-ಧನದಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಮಾಜಿ ಶಾಸಕರನ್ನು ಪಕ್ಷಕ್ಕೆ ಸೇರಿಸಿ ಕೊಳ್ಳುವ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಕಾರ್ಯಕರ್ತರು ಯಾವುದೇ ರೀತಿಯ ಗೊಂದಲ ಸೃಷ್ಟಿಸದೆ 15 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಸೂಚಿಸಿದರು.

ಬಿಜೆಪಿ ಕೇಂದ್ರ ನಾಯಕರು ನಿಮ್ಮ ಜತೆಗಿ¨ªಾರೆ. ನಿಮ್ಮನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು. ಪಕ್ಷ ಮತ್ತು ಕಾರ್ಯಕರ್ತರು ನಿಮ್ಮ ಜತೆಗಿ¨ªಾರೆ. ನಿಮಗೆ ಯಾವುದೇ ಆತಂಕ ಬೇಡ. ಎಲ್ಲ ಮಾಜಿ ಶಾಸಕರನ್ನೂ ಗೆಲ್ಲಿಸಿಕೊಂಡು ಬಂದು ಲಕ್ಷ ಜನರನ್ನು ಸೇರಿಸಿ ಬೃಹತ್‌ ಸಮಾವೇಶ ಮಾಡಲಾಗುವುದು ಎಂದು ಹೇಳಿದರು....

ಫೋಟೋ - http://v.duta.us/71cdxgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Yp6eQgAA

📲 Get Karnatakanews on Whatsapp 💬