ಕಮಲ ತೆಕ್ಕೆಗೆ ಕಂಪ್ಲಿ ಪುರಸಭೆ

  |   Bellarynews

ಕಂಪ್ಲಿ: ತೀವ್ರ ಕುತೂಹಲ ಕೆರಳಿಸಿದ್ದ ಕಂಪ್ಲಿ ಪುರಸಭೆ ಫಲಿತಾಂಶ ಗುರುವಾರ ಹೊರಬಿದ್ದಿದ್ದು ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿ ಪುರಸಭೆ ಗದ್ದುಗೆಯನ್ನು ತನ್ನದಾಗಿಸಿಕೊಂಡರೆ, ಕಾಂಗ್ರೆಸ್‌ ತೀವ್ರ ಮುಖಭಂಗ ಅನುಭವಿಸಿದೆ. 23 ವಾರ್ಡ್‌ಗಳಿಗೆ ಜರುಗಿದ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷದ 13 ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸ್ಪಷ್ಟ ಬಹುಮತ ನೀಡಿದರೆ ಕಾಂಗ್ರೆಸ್‌ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನ ನೀಡಿ ಪ್ರಬುದ್ಧತೆ ಮೆರೆದಿದ್ದಾರೆ.

ಬಹುಮತಕ್ಕೆ ಅವಶ್ಯಕ 13 ಸ್ಥಾನಗಳ ಪೈಕಿ ಬಿಜೆಪಿ 13 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಳ ಬಹುಮತ ಪಡೆದುಕೊಂಡಿದೆ. 23 ವಾರ್ಡ್‌ಗಳಲ್ಲಿ ಚುನಾವಣಾ ಕಣದಲ್ಲಿದ್ದ ಒಟ್ಟು 69 ಜನ ಅಭ್ಯರ್ಥಿಗಳಲ್ಲಿ ಬಿಜೆಪಿ 13, ಕಾಂಗ್ರೆಸ್‌ 10 ಸ್ಥಾನಗಳಲ್ಲಿ ವಿಜಯ ಪತಾಕೆ ಹಾರಿಸಿದ್ದಾರೆ.

ಕಳೆದ ಪುರಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‌ 11, ಬಿಎಸ್‌ಆರ್‌ 7, (ಬಿಎಸ್‌ ಆರ್‌ನವರು ನಂತರ ಭಾಜಪ ಸೇರಿದ್ದರು.) ಕೆಜೆಪಿ 2, ಜೆಡಿಎಸ್‌ 1 ಹಾಗೂ ಪಕ್ಷೇತರರು 2 ಜನರು ಆಯ್ಕೆಯಾಗಿದ್ದರು. ಪಕ್ಷೇತರರು ಕಾಂಗ್ರೆಸ್‌ಗೆ ಬೆಂಬಲಿಸಿದ್ದರಿಂದ ಮೊದಲ ಅವಧಿಯಲ್ಲಿ ಕಾಂಗ್ರೆಸ್ನ ಹುಸೇನ್‌ ಬೀ ಅಧಿಕಾರ ನಡೆಸಿದ್ದರು....

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/iGoF7gAA

📲 Get Bellary News on Whatsapp 💬